ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್ ತಂಡಕ್ಕೆ ಬಹುಮಾನ :ದೇವವೃದ್ಧರ ಪ್ರಥಮ, ಮಗು ಮತ್ತು ಮರ ದ್ವಿತೀಯ

New Project (15)
Published on

ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಜನ್ಮದಿನೋತ್ಸವ ಮತ್ತು ಒಡಿಯೂರು ಗ್ರಾಮೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದ ರಾಜಾಂಗಣದಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎರಡು ನಾಟಕಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿ ಪಡೆದವು.

ಡಾ.ಜೀವನ್ ರಾಂ ಸುಳ್ಯ ರಚಿಸಿ, ನಿರ್ದೇಶಿಸಿದ ದೇವವೃದ್ಧರ ನಾಟಕ ಅತ್ಯುತ್ತಮ ನಾಟಕ ಪ್ರಶಸ್ತಿಯೊಂದಿಗೆ 50 ಸಾವಿರ ರೂ. ನಗದು ಬಹುಮಾನ ಹಾಗೂ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆಯಿತು. ನಾಟಕಕ್ಕೆ ಅತ್ಯುತ್ತಮ ಸಂಗೀತ ಸಂಯೋಜಕ ಪ್ರಶಸ್ತಿಯನ್ನು ಆಳ್ವಾಸ್ ಪಿ.ಯು. ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪಡೆದರು.

ಆಳ್ವಾಸ್‌ನ ಇನ್ನೊಂದು ತಂಡ ಪ್ರದರ್ಶಿಸಿದ, ಪ್ರಶಾಂತ್ ಶೆಟ್ಟಿ ಕೋಟ ನಿರ್ದೇಶಿಸಿದ್ದ ‘ಮಗು ಮತ್ತು ಮರ’ ನಾಟಕ ದ್ವಿತೀಯ ಪ್ರಶಸ್ತಿಯೊಂದಿಗೆ 30 ಸಾವಿರ ರೂ. ನಗದು ಪಡೆಯಿತು. ಈ ನಾಟಕದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಮನೋಜ್ ತೀರ್ಥಹಳ್ಳಿ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತೇಜಸ್ವಿನಿ ತರೀಕೆರೆ ಪಡೆದರು.

ಪ್ರಶಸ್ತಿಯನ್ನು ಶ್ರೀ ಒಡಿಯೂರು ಗುರುದೇವಾನಂದ ಸ್ವಾಮಿಗಳು ಪ್ರದಾನಿಸಿದರು. ಸ್ಪರ್ಧೆಯಲ್ಲಿ ಉಡುಪಿ, ದ.ಕ. ಜಿಲ್ಲೆಯ ಒಟ್ಟು 12 ತಂಡಗಳು ಭಾಗವಹಿಸಿದ್ದವು. ವಿಜೇತ ವಿದ್ಯಾರ್ಥಿಗಳನ್ನು ಆಳ್ವಾಸ್ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net