ವೇಯ್ಟ ಲಿಫ್ಟಿಂಗ್‌ನಲ್ಲಿ ಆಳ್ವಾಸ್ ಚಾಂಪಿಯನ್

New Project (7)
Published on

ಮೂಡುಬಿದಿರೆ: ಕುಂದಾಪುರದ ಭಂಡಾರ್‌ಕಾರ್ಸ್‌ ಕಾಲೇಜಿನ ಆಶ್ರಯದಲ್ಲಿ ಜರುಗಿದ ಮಂಗಳೂರು ವಿವಿ ಅಂತರ್ ಕಾಲೇಜು ವೇಯ್ಟ ಲಿಫ್ಟಿಂಗ್ ಸ್ಪರ್ಧಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಮಹಿಳಾ ಮತ್ತು ಪುರುಷರ ಎರಡು ವಿಭಾಗದಲ್ಲಿ ತಂಡ ಪ್ರಶಸ್ತಿ ಪಡೆದುಕೊಂಡರು.

ಮಹಿಳಾ ತಂಡ ಒಟ್ಟು 6 ಚಿನ್ನ, 2 ಬೆಳ್ಳಿ ಪದಕಗಳೊಂದಿಗೆ ಒಟ್ಟು 58 ಅಂಕ ಪಡೆದು ಈ ಸಾಧನೆ ಮೆರೆದಿದೆ. ಪುರುಷರ ವಿಭಾಗ 4 ಚಿನ್ನ, 4 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಒಟ್ಟು 55 ಅಂಕಗಳೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆಯಿತು.

55 ಕೆ.ಜಿ. ದೇಹ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕಾಲೇಜಿನ ಪ್ರಶಾಂತ್ ಬೆಸ್ಟ್ ಲಿಫ್ಟರ್ ವೈಯಕ್ತಿಕ ಪ್ರಶಸ್ತಿ ಪಡೆದರು. ಪುರುಷರ ವಿಭಾಗದಲ್ಲಿ ಪ್ರಶಾಂತ್, ಸಂತೋಷ್, ಪ್ರತ್ಯೂಶ್, ಜೋಸುವ ರಾಜ್‌ಕುಮಾರ್ ಚಿನ್ನದ ಪದಕ ಪಡೆದರೆ, ನಾಗರಾಜ್, ನಾಗೇಂದ್ರ ಅಣ್ಣಪ್ಪ, ದರ್ಶನ್, ಶಶಾಂಕ್ ಬೆಳ್ಳಿ ಪದಕ ಪಡೆದರು.

ಮಹಿಳಾ ವಿಭಾಗದಲ್ಲಿ ಶ್ರಾವ್ಯಾ, ಸೀಮಾ, ಅನುಷಾ, ತನುಷಾ, ವಿತಶ್ರೀ, ದಿವ್ಯಾ ಚಿನ್ನದ ಗಳಿಸಿದರೆ, ಮಲ್ಲಮ್ಮ, ನಾಗಶ್ರೀ ಬೆಳ್ಳಿ ಪದಕ ಪಡೆದುಕೊಂಡರು. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net