ಒಲಿಂಪಿಕ್ಸ್​ಗೆ ಮೂಡುಬಿದಿರೆ ಆಳ್ವಾಸ್​ನ ಇಬ್ಬರು ಕ್ರೀಡಾಪಟುಗಳು ಆಯ್ಕೆ

Olympics Dhanalakshmi and Shubha
Published on

ಮೂಡುಬಿದಿರೆ: ಟೋಕಿಯೋದಲ್ಲಿ ಜುಲೈ 23ರಿಂದ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಳ್ವಾಸ್​ನ ಕ್ರೀಡಾ ವಿಭಾಗ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ 4*400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ಎಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ಆಳ್ವಾಸ್ ವಿದ್ಯಾಸಂಸ್ಥೆಯ ಹಲವು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್​ನಲ್ಲಿ ಸಾಧನೆ ಮಾಡಿದ್ದು, ಈ ಬಾರಿ ಆಯ್ಕೆಯಾದ ಕ್ರೀಡಾ ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಿದ್ದಾಗಿ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net