ಒಲಿಂಪಿಕ್ಸ್​ಗೆ ಮೂಡುಬಿದಿರೆ ಆಳ್ವಾಸ್​ನ ಇಬ್ಬರು ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಟೋಕಿಯೋದಲ್ಲಿ ಜುಲೈ 23ರಿಂದ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಆಳ್ವಾಸ್​ನ ಕ್ರೀಡಾ ವಿಭಾಗ ದತ್ತು ಶಿಕ್ಷಣ ಯೋಜನೆಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮೀ ಹಾಗೂ ಶುಭಾ 4*400 ಮಿಕ್ಸೆಡ್ ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾಲಯ ಕೂಟಗಳಲ್ಲಿ ಪ್ರತಿನಿಧಿಸಿದ್ದರು ಎಂದು ಎಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಆಳ್ವಾಸ್ … Continue reading ಒಲಿಂಪಿಕ್ಸ್​ಗೆ ಮೂಡುಬಿದಿರೆ ಆಳ್ವಾಸ್​ನ ಇಬ್ಬರು ಕ್ರೀಡಾಪಟುಗಳು ಆಯ್ಕೆ