ಆಳ್ವಾಸ್ ವಿದ್ಯಾರ್ಥಿ ವೇತನ ಪರೀಕ್ಷೆ

blank
blank

ಚಿಕ್ಕಮಗಳೂರು: ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ ಏ. ೧೪ ಮತ್ತು ೨೦ರಂದು ನಡೆಯಲಿದೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಕನಿಷ್ಟ ೧೦ ಸಾವಿರದಿಂದ ಗರಿಷ್ಟ ೨.೪೦ ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕದಲ್ಲಿ ವಿನಾಯಿತು ನೀಡಲಾಗುತ್ತದೆ. ಸಿಬಿಎಸ್‌ಇ, ಐಸಿಎಸ್‌ಸಿ ಮತ್ತು ರಾಜ್ಯ ಪಠ್ಯಕ್ರಮದ ಕನ್ನಡ ಮಾಧ್ಯಮ, ಇಂಗ್ಲಿಷ್ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಈ ಸ್ಫರ್ಧೆಯಲ್ಲಿ ಹಾಜರಾಗಬಹುದು ಎಂದು ಆಳ್ವಾಸ್ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರತಾಪ್‌ಶೆಟ್ಟಿ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ ಬಹುಮಾನ ಪುರಸ್ಕಾರಗಳನ್ನು ನೀಡಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದಿಂದ ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ೧೦ ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದೆ ಎಂದರು.
ಹತ್ತನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢ ಶಿಕ್ಷಣ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಬಹುದಾಗಿದೆ ಎಂದು ಹೇಳಿದರು.
ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಮತ್ತು ಅನನ್ಯ ಮಾದರಿಯ ಶಿಕ್ಷಣ ನೀಡುತ್ತಿರುವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ಮಾಹಿತಿ ನೀಡಿದರು.
ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು ೧೨೦ ನಿಮಿಷಗಳ ಪರೀಕ್ಷೆಯು ಏಪ್ರಿಲ್ ೧೪ ಹಾಗೂ ೨೦ರಂದು ಎರಡು ಬಾರಿ ನಡೆಯಲಿದೆ. ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಹಾಗೂ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಅವರಣದಲಿನ್ಲ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಆಗಮಿಸಿ ಪರೀಕ್ಷೆ ಬರೆಯಬಹುದು. ಇಂಗ್ಲಿಷ್ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ ಎಂದು ವಿವರಿಸಿದರು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು eಠಿಠಿm://o್ಚeಟ್ಝZ್ಟoeಜಿm.Z್ಝqZo.ಟ್ಟಜ/Pಖಿಇ/್ಝಟಜಜ್ಞಿ.mem ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆಯ ದಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಪಾಲಕರ ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸಮಾಲೋಚನೆ ನಡೆಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ೮೮೮೪೪೭೭೫೮೮, ೬೩೬೬೩೭೭೮೨೭ ಸಂಪರ್ಕಿಸಬಹುದು ಎಂದು ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಆಳ್ವಾಸ್ ಕಾಲೇಜು ಉಪನ್ಯಾಸಕ ರವಿ ಶೆಣೈ, ಉದ್ಯಮಿ ಪ್ರಸನ್ನ ಶೆಟ್ಟಿ ಉಪಸ್ಥಿತರಿದ್ದರು.

Share This Article

ಮೀನಿನ ಕಣ್ಣು ಆರೋಗ್ಯಕ್ಕೆ ಉತ್ತಮ! ಸೇವನೆಯಿಂದ ಏನ್ನೆಲ್ಲ ಪ್ರಯೋಜನ? ಇಲ್ಲಿದೆ ಉಪಯುಕ್ತ ಮಾಹಿತಿ | Fish Eye

Fish Eye: ಮೀನಿನ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಅದಕ್ಕಿಂತ ಹೆಚ್ಚಿನ ಆರೋಗ್ಯಕಾರಿ ಅಂಶಗಳು ಮೀನಿನ…

ಪಾರ್ಲಿಮೆಂಟ್​ ಮೆನುವಿನಲ್ಲಿ ರಾಗಿ ಇಡ್ಲಿ ದರ್ಬಾರ್​! ಮಾಡೊದೇಗೆ? ಇಲ್ಲಿದೆ ಸಿಂಪಲ್ಸ್​ ಟಿಪ್ಸ್​​.. | Ragi Idli

Ragi Idli : ಇತ್ತೀಚಿನ ವೇಗದ ಆಧುನಿಕ ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳೋದೆ ಕಷ್ಟವಾಗಿದೆ. ಆದರಲ್ಲೂ ಪಟ್ಟಣ…