More

  ಮಕ್ಕಳ ಚಟುವಟಿಕೆಗಳ ಮೇಲಿರಲಿ ಸದಾ ಗಮನ

  ತ್ಯಾಗರ್ತಿ: ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಹಾಗೂ ದೈನಂದಿನ ಚಟುವಟಿಕೆಗಳನ್ನು ಗಮನಿಸುತ್ತಾ ಇರಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

  ಇಲ್ಲಿನ ವಿವೇಕಾನಂದ ವಿದ್ಯಾಸಂಸ್ಥೆಯ ಪ್ರೌಢಶಾಲೆ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಬಣ್ಣದ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪಾಲಕರ ಪಾತ್ರ ತುಂಬ ದೊಡ್ಡದು. ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ ಹಣ ಕೂಡಿಡುವ ಬದಲು ಉತ್ತಮ ಶಿಕ್ಷಣ ನೀಡಿದರೆ ಬದುಕು ಕಟ್ಟಿಕೊಳ್ಳಲು ಸಾಧ್ಯ. ಪಾಲಕರ ಸಭೆಯಲ್ಲಿ ತಪ್ಪದೇ ಭಾಗವಹಿಸಬೇಕು. ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ ಹಿರಿಯರಿಗೆ ಗೌರವ ಕೊಡುವುದನ್ನು ರೂಢಿಸಬೇಕು ಎಂದು ಹೇಳಿದರು.
  ನಿವೃತ್ತ ಶಿಕ್ಷಕ ನಾರಾಯಣಮೂರ್ತಿ ಕಾನುಗೋಡು ಮಾತನಾಡಿ, ಶಿಕ್ಷಣವು ಮಕ್ಕಳಿಗೆ ಬದುಕುವ ಕೌಶಲ ಕಲಿಸಬೇಕು. ಸಮಾಜದಲ್ಲಿ ಮಾತನಾಡುವ ಕಲೆ, ಧೈರ್ಯ ಹಾಗೂ ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳುವಂತೆ ಶಿಕ್ಷಣ ನೀಡಬೇಕು ಎಂದು ಹೇಳಿದರು.
  ಬಣ್ಣದ ಹಬ್ಬದ ಅಂಗವಾಗಿ ಮಕ್ಕಳಿಗೆ ಹಾಗೂ ಪಾಲಕರಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಮಕ್ಕಳಿಂದ ಸಂಜೆ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಯಿತು.
  ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಂ.ಗಣಪತಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಪ್ರಭಾವತಿ ಲೋಕೇಶ್, ಬರೂರು ಗ್ರಾಪಂ ಅಧ್ಯಕ್ಷ ಮಂಜುನಾಥ, ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಎಚ್.ಹೊಳಿಯಪ್ಪ, ಮುಖ್ಯಶಿಕ್ಷಕ ತೊಳಜಾ ನಾಯ್ಕ,ಪ್ರಮುಖರಾದ ಇಸಾಕ್, ಗಿರೀಶ್, ಮುಸರ್ವೇಶ್, ಸದಾಚಾರಿ ಗೌಡ , ಎಚ್.ಆರ್.ರಮೇಶ್ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts