More

    ಶಿಕ್ಷಕರ ಸಮಸ್ಯೆಗಳಿಗೆ ಸದಾ ಸ್ಪಂದನೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ

    ಮೈಸೂರು:ಶಿಕ್ಷಕರ ಪಾವಿತ್ರೃತೆ ಕಾಪಾಡಿಕೊಂಡು ಬಂದಿರುವ ನಾನು ನನ್ನ ಅಧಿಕಾರಾವಧಿಯಲ್ಲಿ ಶಿಕ್ಷಕರ ಭಾವನೆಗೆ ಧಕ್ಕೆ ತರದೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಬಾರಿಯೂ ಶಿಕ್ಷಕರು ನನ್ನನ್ನು ಬೆಂಬಲಿಸಲಿದ್ದಾರೆ ಎಂದು ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಹೇಳಿದರು.
    ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
    ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ಶಿಕ್ಷಕರು ಸೇರಿ ನನ್ನನ್ನು ನಾಲ್ಕು ಬಾರಿ ಈ ಕ್ಷೇತ್ರದಿಂದ ಆಯ್ಕೆ ಮಾಡಿದ್ದಾರೆ. ಮೊದಲ ಬಾರಿಗೆ ಕಾಂಗ್ರೆಸ್, ಎರಡನೇ ಬಾರಿ ಪಕ್ಷೇತರ, ಮೂರು ಮತ್ತು ನಾಲ್ಕನೇ ಬಾರಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದೆ. ಈಗ ಐದನೇ ಬಾರಿಗೆ ಮತ್ತೆ ನನ್ನ ತವರು ಪಕ್ಷ ಕಾಂಗ್ರೆಸ್‌ಗೆ ಬಂದಿದ್ದೇನೆ ಎಂದರು.
    ನನ್ನ ಅವಧಿಯಲ್ಲಿ ಶಿಕ್ಷಕರ ಪಾವಿತ್ರೃತೆ ಕಾಪಾಡಿಕೊಂಡು ಬಂದಿದ್ದೇನೆ. ಶಿಕ್ಷಕರ ಭಾವನೆಗೆ ಧಕ್ಕೆ ತರದೇ ಕೆಲಸ ಮಾಡಿದ್ದೇನೆ. ನಾನು ಯಾವುದೇ ಪಕ್ಷದಿಂದ ಆಯ್ಕೆಯಾಗಿದ್ದರೂ ಶಿಕ್ಷಕರ ಸಮಸ್ಯೆ ಬಂದಾಗ ಧ್ವನಿ ಎತ್ತಿದ್ದೇನೆ. ಇದರಿಂದ ಶಿಕ್ಷಕರ ವಿಶ್ವಾಸ ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತಿರ ಡಿ.ಕೆ.ಶಿವಕುಮಾರ್ ಶಿಕ್ಷಕರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಶಿಕ್ಷಣದ ಬಗ್ಗೆ ಕಾಳಜಿಯುಳ್ಳ ನಾಯಕರಾಗಿದ್ದಾರೆ. ಅಲ್ಲದೇ ಏಳನೇ ವೇತನ ಜಾರಿ ಮಾಡುವುದಾಗಿಯೂ ಭರವಸೆ ನೀಡಿದ್ದಾರೆ. ಪಕ್ಷಾಂತರ ಮಾಡಿದ್ದರೂ ನನ್ನ ಹೋರಾಟ ಶಿಕ್ಷಕರ ಪರವಾಗಿ ಮಾತ್ರ ಇದ್ದು, ಶಿಕ್ಷಕರ ಕ್ಷೇತ್ರದಲ್ಲಿ ಅನೇಕ ಸುಧಾರಣೆ ಆಗುವ ನಿಟ್ಟಿನಲ್ಲಿ ಶ್ರಮ ವಹಿಸುವುದಾಗಿ ತಿಳಿಸಿದರು.
    ಕಾಂಗ್ರೆಸ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಅಡ್ಡಿಪಡಿಸುವ ಮುನ್ನ, ಆ ಎರಡೂ ಪಕ್ಷಗಳಲ್ಲಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಬಿಜೆಪಿ ಅಭ್ಯರ್ಥಿ ಘೋಷಿಸುತ್ತಿದ್ದಂತೆ ಜೆಡಿಎಸ್ ನಮಗೆ ಕ್ಷೇತ್ರ ಬೇಕು ಎಂದು ತಗಾದೆ ತೆಗೆದಿದೆ. ಹಾಗಾಗಿ ಮೊದಲು ಅವರು ಒಮ್ಮತದ ಮೈತ್ರಿ ಅಭ್ಯರ್ಥಿ ಘೋಷಣೆ ಮಾಡಲಿ ಎಂದು ಕಾಲೆಳೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts