More

    ಕಾರ್ಯಕರ್ತರ ಧ್ವನಿಯಾಗಿ ಸದಾ ಕೆಲಸ ಮಾಡುವೆ: ಶಾರದಾ ಪೂರ್ಯಾನಾಯ್ಕ್

    ಶಿವಮೊಗ್ಗ: ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ರಿದಂತೆ ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರ ಧ್ವನಿಯಾಗಿ ಸದಾ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾನಾಯ್ಕ್ ಹೇಳಿದರು.

    ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ಜಿಲ್ಲಾ ಜೆಡಿಎಸ್‌ನಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮತ್ತು ಸಿಎಲ್‌ಪಿ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಮಟ್ಟದಲ್ಲಿ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲೆಯಿಂದಲೇ ಮೊದಲು ನನ್ನ ಕೆಲಸ ಆರಂಭಿಸಲಾಗುವುದು ಎಂದರು.
    ಪಕ್ಷದ ಸಂಘಟನೆಯಲ್ಲಿ ಕಾರ್ಯಕರ್ತರ ಶಕ್ತಿ ದೊಡ್ಡದು. ಅವರ ಶಕ್ತಿಯನ್ನು ನಾನೂ ಕೊಂಡೊಯ್ಯುವ ಕೆಲಸ ಮಾಡುತ್ತೇನೆ. ಇಡೀ ಜಿಲ್ಲೆಯಾದ್ಯಂತ ಕಾರ್ಯಕರ್ತರ ಸಂಘಟನೆಗೊಳಿಸಿ ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ. ವಿಧಾನಸಭೆ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಜೆಡಿಎಸ್ ಶಾಸಕರ ಸಂಖ್ಯೆ ನೋಡಿ ಬೇಸರವಾಗಿತ್ತು. ಕುಮಾರಸ್ವಾಮಿ ಅವರು ಸದನಕ್ಕೆ ಬರುವುದೇ ಅನುಮಾನವಾಗಿತ್ತು. ಆದರೆ ಕುಮಾರಸ್ವಾಮಿ ಅವರು ಧೃತಿಗೆಡದೇ ಧೈರ್ಯ ತೆಗೆದುಕೊಂಡು ಪ್ರತಿಪಕ್ಷದ ನಾಯಕ ಅಲ್ಲದಿದ್ದರೂ ಆಡಳಿತ ಪಕ್ಷಕ್ಕೆ ಚಾಟಿ ಬೀಸುವ ಕೆಲಸ ಮಾಡುತ್ತಿದ್ದಾರೆ. ಅವರ ನಡೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.
    ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿದರು. ಮುಖಂಡ ದಾದಾಪೀರ್ ಪ್ರಸ್ತಾವಿಕ ಮಾತನಾಡಿದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದಪ್ಪ, ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪ ಮೇಯರ್ ಎಚ್.ಪಾಲಾಕ್ಷಿ, ನಗರ ಅಧ್ಯಕ್ಷ ಗೋವಿಂದಪ್ಪ, ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪ್ರಮುಖರಾದ ಕೆ.ಎನ್.ರಾಮಕೃಷ್ಣ, ಶಿವನಾಯ್ಕ, ಇ.ಮಹೇಶ್ವರಪ್ಪ, ಕಾಂತರಾಜ್, ರಾಜಣ್ಣ, ಮಂಜುನಾಥ, ಸಂಗಣ್ಣ, ದೀಪಕ್ ಸಿಂಗ್, ಪುಷ್ಪಾ, ಅಬ್ದುಲ್ ವಾಜೀಬ್, ಕರುಣಾಕರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts