ನುಗ್ಗೇಹಳ್ಳಿ: ಹೋಬಳಿಯ ಚಿಕ್ಕೋನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಅಮರಗಿರಿ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ವಿಜೃಂಭಣೆಯಿಂದ ಜರುಗಿತು.

ರಥೋತ್ಸವದ ಪ್ರಯುಕ್ತ ದೇವಾಲಯದ ಆವರಣದಲ್ಲಿ ತಳಿರು ತೋರಣ, ಬಾಳೆಕಂದು ಹಾಗೂ ಹೂಗಳಿಂದ ಸಿಂಗರಿಸಲಾಗಿತ್ತು. ಬೆಳಗ್ಗೆ ಮೂಲ ದೇವರಿಗೆ ರುದ್ರಾಭಿಷೇಕ ಪಂಚಾಮೃತ ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಬೆಳಗ್ಗೆ ಮೂಲ ದೇವರಿಗೆ ರುದ್ರಾಭಿಷೇಕ ಪಂಚಾಮೃತ ಅಭಿಷೇಕ ಸೇರಿದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನೆರವೇರಿಸಲಾಯಿತು. ಆಗಮಿಸಿದ ಭಕ್ತರು ರಥದ ಕಳಶಕ್ಕೆ ಹಣ್ಣು ದವನ ಎಸೆದು ಭಕ್ತಿ ಸಮರ್ಪಿಸಿದರು.
ಭಕ್ತಾದಿಗಳಿಗೆ ಪಾನಕ, ಫಲಾಹಾರ, ಅನ್ನದಾಸೋಹ ವ್ಯವಸ್ಥೆಗೊಳಿಸಲಾಗಿತ್ತು. ದೇವರ ದರ್ಶನಕ್ಕೆ ಆಗಮಿಸಿದ ಭಕ್ತರಿಂದ ಗ್ರಾಮ ಹಾಗೂ ದೇವಾಲಯ ಆವರಣ ತುಂಬಿ ತುಳುಕುತ್ತಿತ್ತು. ಶಾಸಕ ಸಿ.ಎನ್.ಬಾಲಕೃಷ್ಣ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ತಹಸೀಲ್ದಾರ್ ವಿ.ಎನ್.ನವೀನ್‌ಕುಮಾರ್, ಪುರ ವರ್ಗ ಹಿರೇಮಠದ ಶ್ರೀ ಮಹೇಶ್ವರ ಸ್ವಾಮೀಜಿ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೇ ಎನ್.ಪರಮೇಶ್, ಮುಜರಾಯಿ ಅಧಿಕಾರಿ ಲತಾ, ಅರ್ಚಕರ ಸಂಘದ ತಾಲೂಕು ಅಧ್ಯಕ್ಷ ಶ್ರೀಧರ್‌ಮೂರ್ತಿ, ಭಕ್ತಾದಿಗಳು, ಗ್ರಾಮಸ್ಥರು ಇತರರು ಹಾಜರಿದ್ದರು.