Friday, 16th November 2018  

Vijayavani

Breaking News

ಅಮರನಾಥ ಯಾತ್ರಿಕರಿದ್ದ ವಾಹನ ಅಪಘಾತ: 13 ಜನರಿಗೆ ಗಾಯ

Thursday, 12.07.2018, 12:01 PM       No Comments

ಶ್ರೀನಗರ: ಅಮರನಾಥ ಯಾತ್ರಿಕರು ಪ್ರಯಾಣಿಸುತ್ತಿದ್ದ ಟೆಂಪೋ ವಾಹನ ಗುರುವಾರ ಉಧಂಪುರದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 13 ಯಾತ್ರಿಕರು ಗಾಯಗೊಂಡಿದ್ದಾರೆ.

ಮೂವರು ಗಂಭೀರ ಗಾಯಗೊಂಡಿದ್ದು ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನೂ ಉಧಂಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಅಪಘಾತವಾಗುತ್ತಿದ್ದಂತೆ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್​, ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಉಧಂಪುರ ಜಿಲ್ಲಾಧಿಕಾರಿಯಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ಅವರೆಲ್ಲ ಉತ್ತರ ಪ್ರದೇಶದ ಝಾನ್ಸಿ ಹಾಗೂ ಸುತ್ತಮುತ್ತಲ ಪ್ರದೇಶದವರು. ಅವರಿಗೆ ಅಗತ್ಯ ನೆರವು ನೀಡಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

Back To Top