More

    ಬೆಟ್ಟಳ್ಳಿ ಮಾರಮ್ಮನಿಗೆ ಅಮಾವಾಸ್ಯೆ ಪೂಜೆ

    ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದಲ್ಲಿ ಶುಕ್ರವಾರ ಅಮಾವಾಸ್ಯೆ ಅಂಗವಾಗಿ ದೇವಿಗೆ ವಿಶೇಷ ಪೂಜೆ ಜರುಗಿತು. ಭಕ್ತರು ದೇವರ ದರ್ಶನ ಪಡೆದರು.

    ಬೆಳಗ್ಗೆ 5.30ರಲ್ಲಿ ದೇವಿಗೆ ಹಾಲು, ಮೊಸರು, ಪನ್ನೀರು, ಎಳನೀರು, ಕುಂಕುಮ, ಜೇನುತುಪ್ಪ ಹಾಗೂ ಗಂಧದ ಅಭಿಷೇಕವನ್ನು ನೆರವೇರಿಸಿ ಕುಂಕುಮಾರ್ಚನೆ ಹಾಗೂ ಪುಷ್ಪಾರ್ಚನೆ ಸಲ್ಲಿಸಲಾಯಿತು. ಬಳಿಕ ದೇವಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ನಂತರ ದೇವಿಗೆ ಪಂಚಾಮೃತ ಅಭಿಷೇಕ ಹಾಗೂ ನೈವೇದ್ಯವನ್ನು ಅರ್ಪಿಸಿ ಧೂಪದಾರತಿ, ಕೊಬ್ಬರಿ, ಬೆಲ್ಲ, ನಿಂಬೆಹಣ್ಣಿನ ಆರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಅರ್ಚಕ ಜಯಂತ್‌ರಾವ್ ಸಿಂಧೆ ಪೂಜಾ ಕೈಂಕರ್ಯ ನೆರವೇರಿಸಿದರು.

    ಪಟ್ಟಣ ಸೇರಿದಂತೆ ಭೈರನತ್ತ, ಉದ್ದನೂರು, ಮಾಲಾಪುರ, ಅಜ್ಜೀಪುರ, ಚಿಂಚಳ್ಳಿ, ಮಣಗಳ್ಳಿ, ಮಂಗಲ ಹಾಗೂ ಈ ಭಾಗದ ಇನ್ನಿತರೆ ಕಡೆಗಳಿಂದ ಆಗಮಿಸಿದ ಭಕ್ತರು ದೇವಿಯ ದರ್ಶನವನ್ನು ಪಡೆದರು. ಹಣ್ಣು ಕಾಯಿ ನೀಡಿ ಪೂಜೆ ಸಲ್ಲಿಸಿದರು. ಹರಕೆ ಹೊತ್ತ ಭಕ್ತರು ದೇಗುಲದ ಮುಂಭಾಗದಲ್ಲಿ ಉಪ್ಪು ಸುರಿದು ದೇವಿ ಕೃಪೆಗೆ ಪಾತ್ರರಾದರು.

    ಹಾಗೆಯೇ ಹನೂರು ಸಮೀಪದ ಆರ್.ಎಸ್.ದೊಡ್ಡಿಯ ಶ್ರೀ ಮಹದೇಶ್ವರ, ದಿಂಬಾಂದಾಳೇಶ್ವರ, ವೈಶ್ಯಂಪಾಳ್ಯದ ಶಿವಲಂಕಾರೇಶ್ವರ, ಮಂಗಲದ ಕೋಣನ ಮಾರಮ್ಮ, ಲೊಕ್ಕನಹಳ್ಳಿಯ ಸಂಪಿಗೇಶ್ವರ ದೇಗುಲ ಹಾಗೂ ತಾಲೂಕಿನ ಇನ್ನಿತರೆ ದೇಗುಲಗಳಲ್ಲೂ ಅವರಾತ್ರಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts