More

    ಗ್ರಾಮಸ್ಥರ ಭೀತಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಬೋನಿಗೆ ಬಿತ್ತು: ನಾಗರಹೊಳೆ ಅಭಯಾರಣ್ಯಕ್ಕೆ ಚಿರತೆ ರವಾನೆ

    ಮಂಡ್ಯ: ಗ್ರಾಮಸ್ಥರನ್ನು ಭೀತಿಗೊಳಿಸಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಬಿದ್ದಿದೆ.
    ನಾಗಮಂಗಲ ತಾಲೂಕಿನ ಅಂಬಲ ಜೀರಹಳ್ಳಿಯ ಕಿರುಬನ ಬೆಟ್ಟದಲ್ಲಿ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    15 ದಿನಗಳ ಹಿಂದೆ ಇದೇ ಸ್ಥಳದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿತ್ತು. ರುಬನಬೆಟ್ಟದಲ್ಲಿ ಚಿರತೆಗಳು ಇದ್ದು ಅವುಗಳು ರೈತರ ಕುರಿ ಹಾಗೂ ಮೇಕೆಗಳನ್ನು ಹಿಡಿದು ತಿನ್ನುತ್ತಿದ್ದವು. ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.

    ರೈತರ ಮನವಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ತಿಂಗಳಿಂದ ಬೋನು ಇಟ್ಟು ಕಾಯುತ್ತಿದ್ದರು. ಎರಡು ಚಿರತೆಗಳು ಬೋನಿಗೆ ಬಿದ್ದಿವೆ.

    ಬೋನಿಗೆ ಬಿದ್ದ ಚಿರತೆಯನ್ನು ನಾಗರಹೊಳೆ ಅಭಯಾರಣ್ಯಕ್ಕೆ ಬಿಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಶಿವರಾಮ್​ ತಿಳಿಸಿದ್ದಾರೆ.

    VIDEO: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಡ್ಯಾನ್ಸ್ ಪ್ರಕರಣಕ್ಕೆ ಹೊಸ ಟ್ವಿಸ್ಟ್​: ಹಳೆಯ ವಿಡಿಯೋ ವೈರಲ್ ಮಾಡಿದ ಆಯಾಳ ಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts