

ವಿಜಯವಾಣಿ ಸುದ್ದಿಜಾಲ ಉಡುಪಿ
ನವವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ಹೀಗಾಗಿ ದೇವತಾನುಗ್ರಹ ಮತ್ತು ಸಂಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆ ಸುಲಭವಾಗಲು ಸಾಧ್ಯ ಎಂದು ಅಂಬಲಪಾಡಿಯ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅಭಿಮತ ವ್ಯಕ್ತಪಡಿಸಿದರು.
ಅಂಬಲಪಾಡಿ ಬಿಲ್ಲವ ಸೇವಾ ಸಂ ಹಾಗೂ ಶ್ರೀ ವಿಠೋಬ ಭಜನಾ ಮಂದಿರ ಆಶ್ರಯದಲ್ಲಿ ಇತ್ತೀಚೆಗೆ ಅಂಬಲಪಾಡಿಯಲ್ಲಿ ಸಂದ ಶ್ರೀ ನಾರಾಯಣಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಮತ್ತು ಬ್ರಹ್ಮಶ್ರೀ ನಾರಾಯಣಗುರು ವೇದಿಕೆ ಉದ್ಘಾಟಿಸಿ ವಾತನಾಡಿದರು.
ಹೊಸಚಿಗುರು ಹಳೇ ಬೇರು ಕೂಡಿರಲು ಮರ ಸೊಬಗು ಎನ್ನುವಂತೆ ಶ್ರೀ ವಿಠೋಬ ಭಜನಾ ತಂಡದೊಂದಿಗೆ ವಿದ್ಯಾರ್ಥಿನಿಯರನ್ನೊಳಗೊಂಡ ಮಹಿಳಾ ಕುಣಿತದ ಭಜನಾ ತಂಡ ರಚಿಸಿರುವುದು ಮಾದರಿ ಕಾರ್ಯ. ಸರ್ಕಾರದ ಅನುದಾನ ಮತ್ತು ದಾನಿಗಳ ನೆರವಿನಿಂದ ನಿರ್ವಾಣಗೊಂಡ ಈ ಸಭಾಂಗಣ ಸವಾಜಕ್ಕೆ ಉಪಯುಕ್ತವಾಗಲಿ ಎಂದು ಶುಭ ಹಾರೈಸಿದರು.
ಅಂಬಲಪಾಡಿ ಗ್ರಾಪಂ ಅಧ್ಯಕ್ಷೆ ಸುಜಾತಾ ಶೆಟ್ಟಿ ಮಾತನಾಡಿದರು. ಸಂದ ಅಧ್ಯಕ್ಷ ಶಿವಕುವಾರ್ ಅಂಬಲಪಾಡಿ ಅಧ್ಯಕ್ಷತೆ ವಹಿಸಿದ್ದರು. ಸಂದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರ.ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಮಹಿಳಾ ಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋದಾವರಿ ಎಂ.ಸುವರ್ಣ, ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಗ್ರಾಮಸ್ಥರು ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕ ಪಟೇಲರ ಮನೆ ಎ. ಜಯಕರ ಶೆಟ್ಟಿ ಅಂಬಲಪಾಡಿ ಅವರಿಗೆ ‘ಶಿಕ್ಷಕ ರತ್ನ’ ಪ್ರಶಸ್ತಿ, ನಾಟಕಕಾರ ಗಂಗಾಧರ್ ಕಿದಿಯೂರು ಅವರಿಗೆ ‘ಸಾಹಿತ್ಯ ರತ್ನ’ ಪ್ರಶಸ್ತಿ, ಸವಾಜಸೇವಕ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಅವರಿಗೆ ‘ಸವಾಜ ಸೇವಾ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.