22.5 C
Bengaluru
Sunday, January 19, 2020

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್‌ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಬೆಂಗಳೂರು: ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದ ನಟ, ಮಾಜಿ ಸಚಿವ ಅಂಬರೀಷ್‌ ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಹಿಂದು ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಯಲಿದೆ.

ಕಂಠೀರವ ಸ್ಟುಡಿಯೋದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದ್ದು, ಸಂಸ್ಕಾರಕ್ಕೆ ಮೂರೂವರೆ ಅಡಿ ಎತ್ತರದ ಕಟ್ಟೆಯನ್ನು ನಿರ್ಮಾಣ ಮಾಡಲಾಗಿದೆ. ಒಕ್ಕಲಿಗರ ಸಂಪ್ರದಾಯದ ಪ್ರಕಾರ ಅಂಬಿ ಪುತ್ರ ಅಭಿಷೇಕ್ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ.

ಅಂತ್ಯಕ್ರಿಯೆಗೆ ಬೇಕಾದ ನೀಲಗಿರಿ, ಉಣಸೆ, ಹತ್ತಿ, ಸಾರ್ವೆ, ಗಂಧದ ಕಡ್ಡಿಗಳನ್ನು ಸಿದ್ಧ ಮಾಡಲಾಗಿದೆ. ಇದರ ಜತೆಗೆ ಜಿಲ್ಲಾಧಿಕಾರಿ 13 ಕೆ.ಜಿ. ಗಂಧದ ಚಕ್ಕೆ ತರಲಿದ್ದಾರೆ. ಒಟ್ಟಾರೆ 2.5 ಟನ್ ಕಟ್ಟಿಗೆ, 10 ಕೆ.ಜಿ. ಕೊಬ್ಬರಿ, 5 ಕೆ.ಜಿ. ಕರ್ಪೂರ, 50 ಕೆ.ಜಿ. ತುಪ್ಪದ ಜತೆಗೆ ಒಂದು ಚೀಲ ಹಸುವಿನ ಭರಣಿಯನ್ನು ಅಂತ್ಯಕ್ರಿಯೆಗೆ ಬಳಸಲಾಗುತ್ತದೆ.

ಅಂತ್ಯಕ್ರಿಯೆಯ ಉಸ್ತುವಾರಿಯನ್ನು ಜಿಲ್ಲಾಡಳಿತ, ಸ್ಥಳೀಯ ಶಾಸಕ ಗೋಪಾಲಯ್ಯ ಹಾಗೂ ಬಿಬಿಎಂಪಿ ವಹಿಸಿಕೊಂಡಿದೆ.
ಖ್ಯಾತ ವೈದಿಕ ಡಾ.ಭಾನುಪ್ರಕಾಶ್ ಶಿಷ್ಯರ ತಂಡದಿಂದ ಅಂತಿಮ ವಿಧಿವಿಧಾನ ನೆರವೇರಲಿದೆ. ಭಾನುಪ್ರಕಾಶ್‌ ಅಮೆರಿಕದಲ್ಲಿರುವುದರಿಂದ ಶಿಷ್ಯರಿಗೆ ಫೋನ್ ಮೂಲಕ ಮಾರ್ಗದರ್ಶನ ನೀಡಲಿದ್ದಾರೆ.

ಅಂಬರೀಷ್ ಅಂತ್ಯಕ್ರಿಯೆ ವೀಕ್ಷಣೆಗೆ ಒಟ್ಟಾರೆ 6000 ಆಸನಗಳ ವ್ಯವಸ್ಥೆ ಮಾಡಲಾಗಿದ್ದು, ಗಣ್ಯರಿಗಾಗಿ ಪ್ರತ್ಯೇಕ 1 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳಿಗಾಗಿ ಐದು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗಾಗಿ ನಂದಿನಿ ಲೇಔಟ್‌ನ ಹಿಂಬದಿ ಗೇಟ್ ಮೂಲಕ ಪ್ರವೇಶ ಮತ್ತು ರಿಂಗ್ ರಸ್ತೆಯ ಮುಖ್ಯದ್ವಾರದಲ್ಲಿ ವಿಐಪಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ದೊಡ್ಡ ಎಲ್‌ಇಡಿ ಸ್ಕ್ರೀನ್‌ಗಳನ್ನು ಹಾಕಲಾಗಿದ್ದು, ದೂರ ನಿಂತಿರುವ ಅಭಿಮಾನಿಗಳಿಗೆ ಅಂತ್ಯಸಂಸ್ಕಾರ ಸರಿಯಾಗಿ ಕಾಣಿಸುತ್ತದೆ. ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಕಂಠೀರವ ಸ್ಟುಡಿಯೋ ಸುತ್ತಾ ಬ್ಯಾರಿಕೇಡ್ ಮತ್ತು 15 ಸಾವಿರ ಪೋಲೀಸರಿಂದ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. (ದಿಗ್ವಿಜಯ ನ್ಯೂಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...