More

    ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ

    ಭದ್ರಾವತಿ: ಡಾ. ಬಿ.ಆರ್.ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯ ಹಣ ಬಿಡುಗಡೆಯಾಗಿದ್ದು, ಉಳಿದ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಯ್ಯ ಅವರಿಗೆ ಡಾ. ಬಿ.ಆರ್.ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.
    ತಾಲೂಕಿನ ವಿದ್ಯಾರ್ಥಿಗಳ, ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಭವನ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿ ಹಲವು ಬಾರಿ ಹೋರಾಟ ಮಾಡಲಾಗಿತ್ತು. ಅದರ ಲವಾಗಿ 2018ರಲ್ಲಿ ಬಿಇಒ ಕಚೇರಿ ಹಿಂಭಾಗದಲ್ಲಿ ರಾಜ್ಯ ಸರ್ಕಾರದ 2 ಕೋಟಿ ರೂ., ನಗರಸಭೆಯ 50 ಲಕ್ಷ ರೂ. ಹಾಗೂ ಸಮಾಜ ಕಲ್ಯಾಣ ಇಲಾಖೆಯ 1.50 ಕೋಟಿ ರೂ. ಬಳಕೆ ಮಾಡಿಕೊಂಡು ಅಂಬೇಡ್ಕರ್ ಭವನ ಕಾಮಗಾರಿ ಆರಂಭಿಸಲಾಯಿತು. ಆದರೆ ಪದೆಪದೇ ಹಣದ ಸಮಸ್ಯೆಯಿಂದ ಕಾಮಗಾರಿ ಸ್ಥಗಿತಗೊಳ್ಳುತ್ತಿತ್ತು. ಇದೀಗ ಸಂಪೂರ್ಣ ಕಾಮಗಾರಿಗೆ ಅಗತ್ಯವಿದ್ದ 1.5 ಕೋಟಿ ರೂ. ಗಳನ್ನು ಸಚಿವ ಮಧು ಬಂಗಾರಪ್ಪ ಬಿಡುಗಡೆಗೊಳಿಸಿದ್ದಾರೆ. ಈಗಲಾದರೂ ನಿರ್ಮಿತಿ ಕೇಂದ್ರ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ಆರಂಭವಾಗದಿದ್ದರೆ ಮತ್ತೆ ಹೋರಾಟ ನಡೆಸಲಾಗುವುದು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಗೌರವಾಧ್ಯಕ್ಷ ಟಿ.ಜಿ.ಬಸವರಾಜಯ್ಯ, ಪತ್ರೇಶ್, ಎಸ್.ಆಂಜನೇಯ, ಎಂ.ಸಂಗಮೇಶ. ಸಿದ್ದಲಿಂಗಯ್ಯ, ಸಿ.ಮಹಾಲಿಂಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts