More

    ಅರ್ಹರಿಗೆ ಮೀಸಲಾತಿ ಸಿಗಲಿ: ಸಚಿವ ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಸಮಾಜದಲ್ಲಿ ಎಲ್ಲಿವರೆಗೂ ಜನರ ಮನಪರಿವರ್ತನೆ ಆಗುವುದಿಲ್ಲವೋ ಅಲ್ಲಿವರೆಗೂ ಈ ಜಾತಿ ವ್ಯವಸ್ಥೆ ಬದಲಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 130ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿ, ಸಂವಿಧಾನ ಶಿಲ್ಪ ಡಾ. ಅಂಬೇಡ್ಕರ್ ಹೆಸರಿಗೆ ತನ್ನದೆ ಆದ ಶಕ್ತಿ ಇದೆ. ಸಂವಿಧಾನ ಇಲ್ಲದಿದ್ದರೆ ಸಮಾನತೆ ಎಂಬುದು ಮರೀಚಿಕೆ ಆಗುತ್ತಿತ್ತು. ಅದೇ ಸಂವಿಧಾನ ಇಂದು ವಿಶ್ವದ ಹಲವು ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದರು.
    ಮೀಸಲಾತಿ ಎಂಬುದು ಬರೀ ಮಾತಿನಿಂದ ಸಿಗುವುದಿಲ್ಲ. ದಲಿತರು ಮತ್ತು ಹಿಂದುಳಿದ ವರ್ಗದವರಿಗೆ ಮೀಸಲಾತಿ ಸಿಗಬೇಕಾದರೆ ನ್ಯಾಯಯುತ ಚರ್ಚೆ ಮಾಡಬೇಕಿದೆ. ಜನಸಂಖ್ಯೆ ಆಧರಿಸಿ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಅನೇಕ ವರ್ಷಗಳಿಂದ ಚರ್ಚೆ ಆಗುತ್ತಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ಮೀಸಲಾತಿ ಹೆಚ್ಚಿಸಬೇಕೋ ಅಥವಾ ಬೇಡವೋ ಎಂದು ವರದಿ ನೀಡುವಂತೆ ಸೂಚಿಸಿದೆ. ಈ ಸಂಬಂಧ ಕಳೆದ ಸಚಿವ ಸಂಪುಟದಲ್ಲಿ ಮೀಸಲಾತಿ ಹೆಚ್ಚಿಸುವ ಸಂಬಂಧ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
    ಡಿವಿಎಸ್ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಕೆ.ಜಿ.ವೆಂಕಟೇಶ್ ಉಪನ್ಯಾಸ ನೀಡಿದರು. ಶಾಸಕ ಕೆ.ಬಿ.ಅಶೋಕ ನಾಯ್ಕ, ಎಂಎಲ್ಸಿಗಳಾದ ಆಯನೂರು ಮಂಜುನಾಥ, ಆರ್.ಪ್ರಸನ್ನಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮೇಯರ್ ಸುನೀತಾ ಅಣ್ಣಪ್ಪ, ಡಿಸಿ ಕೆ.ಬಿ.ಶಿವಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ಎಸ್ಪಿ ಬಿ.ಎಂ.ಲಕ್ಷ್ಮೀಪ್ರಸಾದ್, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts