More

    ಸಂವಿಧಾನ ಜಾಗೃತಿ: ಸಿರಿಧಾನ್ಯದಲ್ಲಿ ಅರಳಿದ ಸಂವಿಧಾನ ಶಿಲ್ಪಿ

    ಗದಗ: ನಗರದ ಎಪಿಎಂಸಿ ಆವರಣದಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಫಲ-ಪುಷ್ಪ ಪ್ರದರ್ಶನದಲ್ಲಿ ಸಂವಿಧಾನ ಜಾಗೃತಿಗಾಗಿ ಸಿರಿಧಾನ್ಯದಲ್ಲಿ ಅರಳಿದ ಸಂಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಚಿತ್ರ ಅತ್ಯಾಕರ್ಷಣೆಯ ಕೇಂದ್ರ ಬಿಂದುವಾಗಿದೆ.

    ಸಂವಿಧಾನ ಪೀಠಿಕೆಯನ್ನು ಜನಸಾಮಾನ್ಯರಿಗೆ ಅರ್ಥೈಸಬೇಕು. ಈ ಮೂಲಕ ಜನ ಸಾಮಾನ್ಯರು ಸಹ ಸಂವಿಧಾನವನ್ನು ಅರಿತು ತಮ್ಮ ಹಕ್ಕು ಕರ್ತವ್ಯಗಳನ್ನು ಪಾಲಿಸಬೇಕು. ಸಂವಿಧಾನ ದತ್ತವಾಗಿ ಇರುವ ಹಕ್ಕುಗಳ ಮೂಲಕ ಸಮ ಸಮಾಜ ನಿರ್ಮಾಣಕ್ಕೆ ಜನ ಸಾಮಾನ್ಯರೆಲ್ಲರೂ ಒಂದು ಎಂಬ ಭ್ರಾತೃತ್ವ ಭಾವನೆ ಮೂಡಿಸುವ ಆಶಯವನ್ನು ಸಂವಿಧಾನ ಜಾಗೃತಿ ಕಾರ್ಯಕ್ರಮ ಒಳಗೊಂಡಿದೆ.

    ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಿರಂತರವಾಗಿ ಒಂದು ತಿಂಗಳ ಕಾಲ ನಡೆಯುತ್ತಲಿದೆ. ಇದೇ ಜ. 26ರಂದು ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಚಾಲನೇ ನೀಡಿದ್ದಾರೆ. ಜ.26 ರಿಂದ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಸಂವಿಧಾನದ ಆಶಯಗಳ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವ ಕಾರ್ಯ ಪರಿಣಾಮಕಾರಿಯಾಗಿ ನಡೆಯುತ್ತಲಿದೆ.

    ಫಲ-ಪುಷ್ಪ ಪ್ರದರ್ಶನದಲ್ಲಿಯೂ ಸಹ ಜನ ಸಾಮಾನ್ಯರಿಗೆ ಸಂವಿಧಾನದ ಆಶಯಗಳನ್ನು ತಿಳಿಸಿಕೊಡುವ ಸುದುದ್ದೇಶದಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ ಪ್ರತಿಮೆಯನ್ನು ಸಿರಿಧಾನ್ಯಗಳಲ್ಲಿ ಮೂಡಿಸುವ ಮೂಲಕ ಸಂವಿಧಾನದ ಆಶಯಗಳನ್ನು ಜನ ಸಾಮಾನ್ಯರಿಗೆ ಮೂಡಿಸುವಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಯಶಸ್ವಿಯಾದವು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts