ಅಂಬೇಡ್ಕರ್ ಜಯಂತಿ ಆಚರಣೆಗೆ ಅವಕಾಶವಿರಲಿ

11-RAICHUR-2
Published on

ರಾಯಚೂರು: ನಗರದ ವಿವಿಧೆಡೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಅವಕಾಶ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಸ್ಥಾನಿಕ ಅಧಿಕಾರಿ ಪ್ರಶಾಂತ ಕುಮಾರಗೆ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮಂಗಳವಾರ ಮನವಿ ಸಲ್ಲಿಸಿತು.

ಏ.14 ರಂದು ಬೆಳಗ್ಗೆಯಿಂದ ಸಂಜೆವರೆಗೆ ಕಾರ್ಯಕ್ರಮ ಆಯೋಜಿಸಲಾಗುವುದು. ವಿವಿಧ ರಸ್ತೆಗಳಲ್ಲಿ ನಡೆಯಲಿರುವ ಮೆರವಣಿಗೆಯಲ್ಲಿ 2 ಸಾವಿರಕ್ಕೂ ಅಧಿಕ ಮಹಿಳೆಯರು, ಯುವಕರೊಂದಿಗೆ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆಯಲ್ಲಿ ಯಾವುದೇ ರಾಜಕೀಯ ಪಕ್ಷದ ಮುಖಂಡರು ಭಾಗವಹಿಸುವುದಿಲ್ಲ. ಪರವಾನಗಿ ಕೋರಿ ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸಲಾಗಿದೆ. ಆಚರಣೆಗೆ ಪರವಾನಗಿ ನೀಡುವ ಜತೆಗೆ ಪೊಲೀಸ್ ಭದ್ರತೆ ಒದಗಿಸಬೇಕೆಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net