

ಕಾರ್ಕಳ: ಕ್ರಿಯೇಟಿವ್ ಕಾಲೇಜಿನಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ 134ನೇ ಜನ್ಮದಿನ ಆಚರಿಸಲಾಯಿತು. ಸಂಸ್ಥೆ ಸಹ ಸಂಸ್ಥಾಪಕ ಡಾ.ಗಣನಾಥ ಶೆಟ್ಟಿ ಮತ್ತು ಸಂಸ್ಥೆ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕ ವಿದ್ವಾನ್ ಗಣಪತಿ ಭಟ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.
ಉಪನ್ಯಾಸಕ ವಿನಾಯಕ ಜೋಗ್ ಅಂಬೇಡ್ಕರ್ ಹೋರಾಟ, ಸಾಧನೆ, ಮತ್ತು ಸಂವಿಧಾನ ರಚನೆಯಲ್ಲಿ ಅವರ ಪಾತ್ರದ ಕುರಿತು ಮಾಹಿತಿ ನೀಡಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸಂತೋಷ್ ನಿರೂಪಿಸಿ, ವಂದಿಸಿದರು.