ವಿಶ್ವದಾದ್ಯಂತ ಅಂಬೇಡ್ಕರ್ ಜಯಂತಿ ಆಚರಣೆ

ವಿಶ್ವದಾದ್ಯಂತ ಅಂಬೇಡ್ಕರ್ ಜಯಂತಿ ಆಚರಣೆ
Published on

ಕೆ.ಆರ್.ನಗರ: ವಿಶ್ವದ ಅನೇಕ ರಾಷ್ಟ್ರಗಳು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನವನ್ನು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸುತ್ತಿವೆ ಎಂದು ದಸಂಸ ತಾಲೂಕು ಅಧ್ಯಕ್ಷ ಎಂ.ಎಸ್.ಮಲ್ಲೇಶ್ ಹೇಳಿದರು.

ಪಟ್ಟಣದ ಮಧುವನಹಳ್ಳಿ ಬಡಾವಣೆಯಲ್ಲಿ ಸೋಮವಾರ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಪ್ರತಿಯೊಬ್ಬರೂ ಬಾಬಾ ಸಾಹೇಬರು ನೀಡಿದ ಸಂವಿಧಾನದ ಆಶ್ರಯದಲ್ಲಿಯೇ ಬದುಕು ನಡೆಸುವ ಜತೆಗೆ ಸರ್ಕಾರದಿಂದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಬಾಬಾ ಸಾಹೇಬರ ಜಯಂತಿಯನ್ನು ಒಂದು ಜಾತಿಗೆ ಸೀಮಿತಗೊಳಿಸಿ ಆಚರಿಸುವಂತಾಗಬಾರದು ಎಂದರು.

ಶೋಷಣೆ, ಅಸಮಾನತೆಯ ವಿರುದ್ಧ ನಿರಂತರವಾಗಿ ಹೋರಾಟ ಮಾಡಿ ನೊಂದವರು, ಬಡವರು, ಅಸ್ಪಶ್ಯರು, ಮಹಿಳೆಯರು, ಕಾರ್ಮಿಕರ ಪರವಾಗಿ ನ್ಯಾಯ ಒದಗಿಸಿಕೊಡಲು ಶ್ರಮಿಸಿದ ಕೀರ್ತಿ ಅಂಬೇಡ್ಕರ್‌ಗೆ ಸಲ್ಲಬೇಕು. ತಾವು ಓದಿದ 50 ಸಾವಿರಕ್ಕೂ ಹೆಚ್ಚು ಪುಸ್ತಕಗಳ ಅಂಶಗಳನ್ನು ನೆನಪಿನಲ್ಲಿಟ್ಟುಕೊಂಡಿದ್ದ ಜ್ಞಾನ ಭಂಡಾರ ಅಂಬೇಡ್ಕರ್ ಅವರದು ಎಂದು ಬಣ್ಣಿಸಿದರು.

ಎಂಎಸ್‌ಎಸ್ ತಾಲೂಕು ಅಧ್ಯಕ್ಷ ಮಧುವನಹಳ್ಳಿ ರವಿಕುಮಾರ್, ಈರಯ್ಯ, ಚಲುವರಾಜ್, ರವಿಪೂಜಾರಿ, ಕರ್ಣಕುಮಾರ್, ಪುಟ್ಟಸ್ವಾಮಿ, ಅಯ್ಯುಮಹದೇವ್, ಎಂ.ಡಿ.ಶೇಖರ್, ಚಂದ್ರಶೇಖರ್, ಎಂ.ಚಂದನ್, ರಂಗನಾಥ, ಎಂ.ಆರ್.ನಕುಲ್‌ಕುಮಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net