More

    ಪ್ರಮುಖ ಸ್ಥಳಗಳಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿ

    ಹುಣಸೂರು: ನಗರದ ಪ್ರಮುಖ ಸ್ಥಳದಲ್ಲಿ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರಿಗೆ ದಲಿತ ಮುಖಂಡರು ಮನವಿ ಸಲ್ಲಿಸಿದರು.

    ನಗರಕ್ಕೆ ಸೋಮವಾರ ಸಚಿವರು ಆಗಮಿಸಿದ ವೇಳೆ ಮನವಿ ಸಲ್ಲಿಸಿ ಮಾತನಾಡಿದ ದಲಿತ ಮುಖಂಡ ನಿಂಗರಾಜ ಮಲ್ಲಾಡಿ, 10 ವರ್ಷಗಳಿಂದಲೂ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಮನವಿಗೆ ಸ್ಪಂದನೆ ದೊರಕುತ್ತಿಲ್ಲ. ಹುಣಸೂರು ಉಪವಿಭಾಗ ಮಟ್ಟದ ಕೇಂದ್ರವಾಗಿದ್ದು, ಇಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಇತರ ಸಮುದಾಯದವರು ವಾಸಿಸುತ್ತಿದ್ದಾರೆ. ಅಂಬೇಡ್ಕರ್ ಅವರ ಆದರ್ಶ, ತತ್ವಗಳು ಇಂದಿಗೂ ಸಮಾಜಕ್ಕೆ ಅಗತ್ಯವಾಗಿ ಬೇಕಾಗಿದೆ. ನಗರದ ಪ್ರಮುಖ ಸ್ಥಳಗಳಲ್ಲಿ ಅಂಬೆಡ್ಕರ್ ಪ್ರತಿಮೆ ನಿರ್ಮಿಸುವಂತೆ ಮನವಿ ಮಾಡಲಾಗಿದ್ದು, ಸರ್ಕಾರದಿಂದ 5 ಕೋಟಿ ರೂ. ಮಂಜೂರು ಮಾಡಿಸಿ ಪ್ರತಿಮೆ ಹಾಗೂ ಬೃಂದಾವನ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹುಣಸೂರು ನಗರಸಭೆ ಜಾಗ ನಿಗದಿಗೊಳಿಸಿದ ನಂತರ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಬೇಕಾಗುವ ಹಣವನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಂಜೂರು ಮಾಡಲಾಗುವುದೆಂದು ಹೇಳಿದರು.

    ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ, ರತ್ನಪುರಿ ಪುಟ್ಟಸ್ವಾಮಿ, ಬಲ್ಲೇನಹಳ್ಳಿ ಕೆಂಪರಾಜು, ಬನ್ನಿಕುಪ್ಪೆ ಚಿಕ್ಕಸ್ವಾಮಿ, ಹೈರಿಗೆ ಗೋವಿಂದರಾಜು, ಬಿಳಿಕೆರೆ ಸ್ವಾಮಿ, ಅಭಿ ಮೂಕನಹಳ್ಳಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts