

ವಿಜಯವಾಣಿ ಸುದ್ದಿಜಾಲ ಹೆಬ್ರಿ
ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಶ್ರೇಷ್ಠ ಸಂವಿಧಾನದ ಫಲವಾಗಿ ನನ್ನಂತ ಜನ ಸಾಮಾನ್ಯನಿಗೆ ಅಧಿಕಾರ ಸಿಕ್ಕಿದೆ. ಅವರೊಬ್ಬ ಜಗ್ಗತ್ತಿನ ಮಹಾನ್ ವ್ಯಕ್ತಿ. ಅವರ ಆದರ್ಶಗಳನ್ನು ಮುಂದಿನ ತಲೆಮಾರಿಗೆ ನಾವೆಲ್ಲ ಸೇರಿ ಪಸರಿಸಬೇಕು ಎಂದು ಹೆಬ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ್ ಬಂಗೇರ ಹೇಳಿದರು.
ಸೋಮವಾರ ಹೆಬ್ರಿ ತಾಲೂಕು ಆಡಳಿತದಲ್ಲಿ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಡಾ.ಬಿ. ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹೆಬ್ರಿ ತಹಸೀಲ್ದಾರ್ ಎಸ್.ಎ.ಪ್ರಸಾದ್, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಸಂತೋಷ್ ಕುಮಾರ್, ಕಾರ್ಕಳ ತಾಲೂಕು ದೈಹಿಕ ಪರಿವೀಕ್ಷಣ ಅಧಿಕಾರಿ ರವಿಚಂದ್ರ ಕಾರಂತ್ ಇದ್ದರು.