ಸಿಎ ಪರೀಕ್ಷೆ ಅಂತಿಮ ಹಂತಕ್ಕೆ ಆಯ್ಕೆ

PTR_12 JUL_4 - Sinchana M
Published on


ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಎಂ. ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ೨೦೨೪ರ ಮೇನಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ ೧ ಹಾಗೂ ಗ್ರೂಪ್ ೨ ವಿಭಾಗದಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.


ಸಿಂಚನಾ ಸುಳ್ಯದ ಐವತ್ತೊಕ್ಲು ಗ್ರಾಮದ ದಿ.ಸೀತಾರಾಮ ಎಂ ಹಾಗೂ ಸರೋಜಾ ದಂಪತಿ ಪುತ್ರಿ. ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿಪೂರ್ವ ಹಾಗೂ ಪದವಿ ಮಹಾವಿದ್ಯಾಲಯಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶನ ದೊರೆಯುತ್ತಿದೆ. ವಿದ್ಯಾರ್ಥಿನಿಯ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಪ್ರಾಂಶುಪಾಲ ರಾಕೇಶ ಕುಮಾರ್ ಕಮ್ಮಜೆ, ಬೋಧಕ - ಬೋಧಕೇತರರು ಅಭಿನಂದನೆ ಸಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net