ಅಂಬಿ ನಿಂಗ್‌ ವಯಸ್ಸಾಯ್ತೊ ಬಿಡುಗಡೆ ಹಿನ್ನೆಲೆ ಅಭಿಮಾನಿಗಳ ಹರ್ಷೋದ್ಗಾರ

ಮಂಡ್ಯ: ರೆಬಲ್ ಸ್ಟಾರ್ ಅಂಬರೀಷ್ ಅಭಿನಯದ ‘ಅಂಬಿ ನಿಂಗ್ ವಯಸ್ಸಾಯ್ತೊ‌’ ಚಿತ್ರ ಬಿಡುಗಡೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಬಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.

ಹಲವು ವರ್ಷಗಳ ನಂತರ ಪರಿಪೂರ್ಣ ನಾಯಕ ನಟನಾಗಿ ತೆರೆಯ ಮೇಲೆ ಅಂಬಿ ಕಾಣಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.

ಮಂಡ್ಯ ನಗರದ ಸಿಲ್ವರ್ ಜುಬಿಲಿ ಪಾರ್ಕ್‌ನಿಂದ ಸಿದ್ಧಾರ್ಥ ಚಿತ್ರ ಮಂದಿರದವರೆಗೆ ಅಭಿಮಾನಿಗಳು ಮೆರವಣಿಗೆ ನಡೆಸಿದರು. ವಿವಿಧ ಕಲಾತಂಡ, ನೂರಾರು ಆಟೋಗಳು ಮೆರವಣಿಗೆಗೆ ಸಾಥ್ ನೀಡಿದರು. ಈ ವೇಳೆ ಅಂಬಿ ಭಾವಚಿತ್ರ ಹಿಡಿದು ಅಭಿಮಾನಿಗಳು ಒಂದೆಡೆ ಸಂಭ್ರಮಿಸಿದರೆ, ಮತ್ತೊಂದೆಡೆ ಅಂಬಿ ಬೃಹತ್ ಕಟೌಟ್‌ಗೆ ಕ್ಷೀರಾಭಿಷೇಕ ಮಾಡಿದರು.

ಸಂಭ್ರಮಾಚರಣೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಭಾಗಿಯಾಗಿದ್ದರು. ಸಿದ್ದಾರ್ಥ ಚಿತ್ರ ಮಂದಿರದ ಆವರಣದಲ್ಲಿ ಅಭಿಮಾನಿಗಳು ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. (ದಿಗ್ವಿಜಯ ನ್ಯೂಸ್)