More

    ಗಂಗಾಮತ ಸಮುದಾಯಕ್ಕೆ ಎಸ್ಟಿ ಮೀಸಲು ಅಗತ್ಯ

    ಗಂಗಾವತಿ: ರಾಜ್ಯದಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಗಂಗಾಮತ ಸಮುದಾಯಕ್ಕೆ ಎಸ್ಟಿ ಮೀಸಲಿನ ಅಗತ್ಯವಿದ್ದು, ಸರ್ಕಾರ ನಿರ್ಲಕ್ಷಿಸಿದರೆ ದಿಲ್ಲಿ ಚಲೋ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಹಾವೇರಿ ಚೌಡಯ್ಯದಾನಾಪುರದ ಅಂಬಿಗರ ಚೌಡಯ್ಯ ಗುರುಪೀಠದ ಪೀಠಾಧಿಪತಿ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಹೇಳಿದರು.

    ನಗರದ ಅಂಬಿಗರ ಚೌಡಯ್ಯ ವೃತ್ತದ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದರು. ಗಂಗಾಮತ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿದ್ದು, ಮೀಸಲು ದೊರೆತರೆ ಎಲ್ಲ ಹಕ್ಕುಗಳನ್ನು ಪಡೆಯಲು ಸಾಧ್ಯ. ಸಮುದಾಯದ ಬೇಡಿಕೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಮೀಸಲು ಜಾರಿ ವಿಚಾರ ಕೇಂದ್ರ ಸರ್ಕಾರದ ಹಂತದಲ್ಲಿದ್ದು, ಕೂಡಲೇ ೋಷಣೆ ಮಾಡಬೇಕು. ನಿರ್ಲಕ್ಷಿಸಿದರೆ ಸಮುದಾಯದೊಂದಿಗೆ ದಿಲ್ಲಿ ಚಲೋ ಚಳವಳಿ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಾಗುವುದು. ಹೋರಾಟ ಮನೋಭಾವನೆಯಿಂದ ಎಲ್ಲ ಹಕ್ಕುಗಳನ್ನು ಪಡೆಯಲು ಸಾಧ್ಯವಿದ್ದು, ಸಮುದಾಯ ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದರು.

    ಅಂಬಿಗರ ಚೌಡಯ್ಯ ಪೀಠದಲ್ಲಿ ಜ.14 ಮತ್ತು 15ರಂದು ಚೌಡಯ್ಯ ವಚನ ರಥೋತ್ಸವ ಹಮ್ಮಿಕೊಳ್ಳಲಾಗಿದೆ. ಎರಡು ದಿನದ ರಥೋತ್ಸವದಲ್ಲಿ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದರು. ಗಂಗಾಮತ ಸಮುದಾಯದ ತಾಲೂಕು ಅಧ್ಯಕ್ಷ ಈ.ಧನರಾಜ್, ಪ್ರಮುಖರಾದ ಕೆ.ಹುಲುಗಪ್ಪ, ಭೈರೇಶ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts