More

    ಅಂಬಿಗರ ಚೌಡಯ್ಯ ನೈಜತೆಯನ್ನು ಸಾರಿದ ಶ್ರೇಷ್ಠ ವಚನಕಾರ

    ಸಾಗರ: ವಚನಗಳ ಮೂಲಕ ಸಮಾಜದ ಸಮಸ್ಯೆಗಳನ್ನು ತೆರೆದಿಟ್ಟು ಭಕ್ತಿಯ ಮಹತ್ವವನ್ನು ಪರಿಚಯಿಸಿದ ಶ್ರೇಷ್ಠ ದಾರ್ಶನಿಕ ಅಂಬಿಗರ ಚೌಡಯ್ಯ ಎಂದು ತಹಸೀಲ್ದಾರ್ ಚಂದ್ರಶೇಖರ್ ನಾಯ್ಕ್ ಹೇಳಿದರು.

    ತಾಲೂಕು ಕಛೇರಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ನಿಜಗುಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ವಚನಕಾರರಲ್ಲಿ ಇವರು ಮುಖ್ಯವಾಗಿ ಗುರುತಿಸಿಕೊಂಡವರು. ನೇರ, ನಿಷ್ಠುರ ವ್ಯಕ್ತಿತ್ವ ಹೊಂದಿದ್ದರು. ಶರಣ ಪರಂಪರೆಯಲ್ಲಿ ಮುಖ್ಯವಾಗಿ ಕಾಣುವ ಇವರು ಜನಸಮುದಾಯಗಳ ನಡುವೆ ಸಮನ್ವಯವನ್ನು ಸಾಧಿಸಿದ್ದರು. ಸತ್ಯದ ಪ್ರವರ್ತಕ ಎಂದರೆ ಅದು ಅಂಬಿಗರ ಚೌಡಯ್ಯ ಎಂದರೆ ತಪ್ಪಿಲ್ಲ. ಇಂತಹ ದಾರ್ಶನಿಕರ ಸಂದೇಶಗಳನ್ನು ಪಾಲಿಸುವ ಮೂಲಕ ಜೀವನ ಮೌಲ್ಯಗಳನ್ನು ಹೆಚ್ಚಿಸಿಕೊಳ್ಳುವ ಕೆಲಸ ಆಗಬೇಕಾಗಿದೆ ಎಂದರು.
    ಆವರಿಸಿದ ವಚನ ಕ್ರಾಂತಿ: ಆಚರಣೆಗಳ ಭಾರಕ್ಕೆ ಬಗ್ಗಿ ಹೋಗಿದ್ದ ಸನಾತನ ಸಂಸ್ಕೃತಿಯಲ್ಲಿ ಬೆಳೆದಿದ್ದ ವರ್ಣಕಳೆಯನ್ನು ಅಂದು ವಚನ ಸಂಸ್ಕೃತಿಯೆಂಬ ಧಾರ್ಮಿಕ ಕ್ರಾಂತಿಯು ಆವರಿಸಿಕೊಂಡಿತು ಎಂದು ಸಾಮಾಜಿಕ ಕಾರ್ಯಕರ್ತ ಬಿ.ಡಿ.ರವಿಕುಮಾರ್ ಹೇಳಿದರು. ಉಪನ್ಯಾಸ ನೀಡಿ, ತನ್ನ ಸರಳವಾದ ಭಾಷೆಯ ಮೂಲಕ ಜನರ ನಾಡಿ ಮಿಡಿತದೊಳಗೆ ಮಿಳಿತವಾಗಿ ಎಲ್ಲ ವರ್ಗಗಳ ವಿವೇಕ ಜಾಗೃತಿಯ ಕೆಲಸವನ್ನು ಅದು ಪರಿಣಾಮಕಾರಿಯಾಗಿ ಮಾಡಿತು. ಆ ಧಾರ್ಮಿಕ ಕ್ರಾಂತಿಗೆ ಶೋಷಿತ ವರ್ಗಕ್ಕೆ ಬೆನ್ನೆಲುಬಾಗುವ ಆಶಯವಷ್ಟೇ ಇರಲಿಲ್ಲ. ಎಲ್ಲೆಡೆಯೂ ಸಮಾನತೆಯ ತತ್ವವನ್ನು, ಜಾತಿರಹಿತ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ನಿಷ್ಕಳಂಕ ಕಾಳಜಿಯೂ ಅದಕ್ಕಿತ್ತು. ಬಸವಣ್ಣ, ಅಲ್ಲಮ ಪ್ರಭು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಹಡಪದ ಅಪ್ಪಣ್ಣ, ಒಬ್ಬರೇ ಇಬ್ಬರೇ. ಹತ್ತಾರು ಶಿವಶರಣರು ವರ್ಣತಂತುಗಳನ್ನು ಕಿತ್ತೊಗೆಯಲು ಪಣತೊಟ್ಟು ಸಮಾಜದ ಅಂತಸತ್ವವನ್ನು ಬಡಿದೆಬ್ಬಿಸಿದ್ದರು ಹೇಳಿದರು.
    ಗಂಗಾಮತ ಸಮಾಜದ ಉಪಾಧ್ಯಕ್ಷ ಧರ್ಮರಾಜ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ, ಉಪ ತಹಸೀಲ್ದಾರ್ ಕಲ್ಲಪ್ಪ ಮೆಣಸಿನಹಾಳ್, ಪ್ರಮುಖರಾದ ವಿ.ಟಿ.ಸ್ವಾಮಿ, ಬಸವರಾಜ, ಮೋಹನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts