ಗಂಗಾಮತಸ್ಥರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ…!

ಮಂಡ್ಯ:  ಸುಮಾರು 39 ಪರ್ಯಾಯ ಪದಗಳಿಂದ ಕರೆಯಲ್ಪಡುವ ಗಂಗಾಮತಸ್ಥ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಜಿಲ್ಲಾ ಗಂಗಾಮತಸ್ಥ ಸಂಘದ ಅಧ್ಯಕ್ಷ ಕೃಷ್ಣಯ್ಯ ಮನವಿ ಮಾಡಿದರು.

ನಗರದ ಜಿಪಂ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಆಯೋಜಿಸಿದ್ದ ‘ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ’ದಲ್ಲಿ ಮಾತನಾಡಿದರು.

ಫೆ.15ರಂದು ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸುವಂತೆ ಸಂಸದ ಎಚ್.ಡಿ.ದೇವೇಗೌಡ ಅವರನ್ನು ಒತ್ತಾಯಿಸಬೇಕೆಂದು ಸಚಿವ ಸಿ.ಎಸ್.ಪುಟ್ಟರಾಜು ಅವರಿಗೆ ಮನವಿ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಾಸಕ ಎಂ.ಶ್ರೀನಿವಾಸ್, ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಡಿಸಿ ಎನ್.ಮಂಜುಶ್ರೀ, ಎಸ್ಪಿ ಶಿವಪ್ರಕಾಶ್ ದೇವರಾಜು, ಜಿಪಂ ಸಿಇಒ ಕೆ.ಯಾಲಕ್ಕಿಗೌಡ ಇತರರಿದ್ದರು.