More

    ಅಧಿಕಾರ ಸಿಕ್ಕಿದ ಕೆಲವೇ ಗಂಟೆಗಳಲ್ಲಿ ಹೆರಿಗೆ: ಅಂಬ್ಲಮೊಗರು ಗ್ರಾಪಂ ಅಧ್ಯಕ್ಷೆಗೆ ಡಬಲ್ ಖುಷಿ!

    ಉಳ್ಳಾಲ: ಅಂಬ್ಲಮೊಗರು ಗ್ರಾಪಂನಲ್ಲಿ ಅನಿರೀಕ್ಷಿತವಾಗಿ ಅಧ್ಯಕ್ಷ ಪಟ್ಟ ಸ್ವೀಕರಿಸಿದ ಮಹಿಳೆಗೆ ಕೆಲವೇ ಗಂಟೆಗಳಲ್ಲಿ ಹೆರಿಗೆಯಾಗಿ ಡಬಲ್ ಖುಷಿ ಅನುಭವಿಸಿದ್ದಾರೆ.

    ಅಂಬ್ಲಮೊಗರು ಗ್ರಾಪಂನಲ್ಲಿ ಈ ಬಾರಿಯೂ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬಂದಿದ್ದಾರೆ. ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಬಂದಿತ್ತು. ಐವರು ಮಹಿಳೆಯರು ಆಡಳಿತ ಪಕ್ಷದಲ್ಲಿದ್ದು, ಇವರೆಲ್ಲರೂ ಪ್ರಥಮ ಬಾರಿಗೆ ಸ್ಪರ್ಧಿಸಿದವರು. ಈ ಹಿನ್ನೆಲೆಯಲ್ಲಿ ಕ್ರೈಸ್ತ ಮಹಿಳೆಗೆ ಅಧ್ಯಕ್ಷ ಸ್ಥಾನ ನೀಡಲು ಸ್ಥಳೀಯ ಕಾಂಗ್ರೆಸ್ ಮುಖಂಡರು ಯೋಚಿಸಿದ್ದರೂ, ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರಕ್ಕೆ ಬಂದಿರುವ ಎಲ್ಲ ಪಂಚಾಯಿತಿಗಳಲ್ಲೂ(ಕೊಣಾಜೆಯಲ್ಲಿ ಮೀಸಲಾತಿಯಿಂದ ಎಸ್ಸಿಗೆ ಅಧ್ಯಕ್ಷ ಸ್ಥಾನ) ಕ್ರೈಸ್ತ ಮತ್ತು ಮುಸ್ಲಿಮರೇ ಅಧ್ಯಕ್ಷರಾಗಿರುವುದನ್ನು ಗಮನದಲ್ಲಿಟ್ಟುಕೊಂಡು ಹಿಂದುಗಳಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅದರಂತೆ ಅಧ್ಯಕ್ಷೆಯಾಗಿ ಲತಾ ಪರಮೇಶ್ವರ್ ಅವರನ್ನು ಆಯ್ಕೆ ಮಾಡಲಾಗಿತ್ತು.

    ತುಂಬು ಗರ್ಭಿಣಿಯಾಗಿದ್ದ ಅವರಿಗೆ ವೈದ್ಯರು ಫೆ.20ಕ್ಕೆ ಹೆರಿಗೆ ದಿನಾಂಕ ನೀಡಿದ್ದರು. ಶುಕ್ರವಾರ ಮಧ್ಯಾಹ್ನ ಅವರು ಪಂಚಾಯಿತಿ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದರು. ರಾತ್ರಿ ವೇಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮುಂದಿನ ಕೆಲವು ತಿಂಗಳು ಅಧ್ಯಕ್ಷ ಸ್ಥಾನದ ಜವಾಬ್ದಾರಿ ಉಪಾಧ್ಯಕ್ಷ ಮೊಹಮ್ಮದ್ ಇಕ್ಬಾಲ್ ಅವರಿಗೆ ಲಭಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts