ಕಾನ್ಸೆಟ್ಟಾ ಆಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆ

Kin_Concenta
Published on

ಕಿನ್ನಿಗೋಳಿ: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ರಕ್ಷಣೆ ಸಿಗಬೇಕಾದರೆ ಅಲ್ಲಿನ ಆಸ್ಪತ್ರೆಗಳಲ್ಲಿ ಉತ್ತಮ ಸೌಲಭ್ಯ ಇರಬೇಕು. ಈ ನಿಟ್ಟಿನಲ್ಲಿ ಎಂಆರ್‌ಪಿಎಲ್ ಗ್ರಾಮೀಣ ಭಾಗದ ಹಲವು ಆಸ್ಪತ್ರೆಗಳಿಗೆ ಸಹಕಾರ ನೀಡುತ್ತಿದೆ ಎಂದು ಎಂಆರ್‌ಪಿಎಲ್ ಸಂಸ್ಥೆ ಅಧಿಕಾರಿ ಸ್ಟೀವನ್ ಪಿಂಟೋ ಹೇಳಿದರು.

ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆಗೆ ಎಂಆರ್‌ಪಿಎಲ್ ಸಿಎಸ್‌ಆರ್ ಅನುದಾನದಿಂದ ಆಂಬುಲೆನ್ಸ್ ಕೊಡುಗೆ ಹಸ್ತಾಂತರಿಸಿ ಮಾತನಾಡಿದರು.

ಆಸ್ಪತ್ರೆ ವತಿಯಿಂದ ಸ್ಟೀವನ್ ಪಿಂಟೋ ಅವರನ್ನು ಗೌರವಿಸಲಾಯಿತು. ಆಸ್ಪತ್ರೆ ಭಗಿನಿ ರೇನಿಷಾ, ಕಿನ್ನಿಗೋಳಿ ಚರ್ಚ್ ಧರ್ಮಗುರು ಫಾ.ಜೋಕಿಮ್ ಫರ್ನಾಂಡಿಸ್, ಡಾ.ಜೀವಿತಾ, ರೋಟರಿ ಕ್ಲಬ್ ಅಧ್ಯಕ್ಷ ಧನಂಜಯ್ ಶೆಟ್ಟಿಗಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ್ ಶೆಟ್ಟಿ, ವಲೇರಿಯನ್ ಅರಾನ್ಹ, ವಿಲಿಯಂ ಡಿಸೋಜ, ಮೈಕಲ್ ಪಿಂಟೋ, ಸ್ಟಾೃನಿ ಪಿಂಟೋ, ರೋಟರಿ ಕ್ಲಬ್ ಅಸಿಸ್ಟೆಂಟ್ ಗವರ್ನರ್ ಶರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net