More

    ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

    ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

    ಮುಷ್ಕರ ಸಂಬಂಧ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಮಂಗಳವಾರ ಇಲಾಖೆ ಆಯುಕ್ತರು ಆಂಬುಲೆನ್ಸ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದರು. ಆದರೆ ಮಾತುಕತೆ ಲಪ್ರದವಾಗಲಿಲ್ಲ. ಈ ಕುರಿತು ಸಚಿವರು ತೀರ್ಮಾನ ಕೈಗೊಳ್ಳಲು ನೀತಿ ಸಂಹಿತೆ ಅಡ್ಡಿಯಾಗಿದೆ. ನೀತಿ ಸಂಹಿತೆ ತೆರವಾದ ನಂತರ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಚುನಾವಣೆ ಲಿತಾಂಶ ನಂತರ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು 108 ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎನ್.ಎಚ್.ಪರಮಶಿವ ಹೇಳಿದರು.

    ಯೋಜನೆಯನ್ನು ಜಿವಿಕೆಇಎಂಆರ್‌ಐ ಸಂಸ್ಥೆ ನಿರ್ವಹಿಸುತ್ತಿದ್ದು, 2,500 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗದಿಪಡಿಸಿದ ವೇತನದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ ಅರ್ಧದಷ್ಟು ವೇತನ ಮಾತ್ರ ನೀಡಲಾಗಿದ್ದು, ಕಳೆದ ಮೂರು ತಿಂಗಳಿಂದ ವೇತನ ಪಾವತಿಸಿಲ್ಲ ಎಂದು ಆರೋಪಿಸಿರುವ ಸಿಬ್ಬಂದಿ, ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts