More

    ಗಬ್ಬೂರಿಗೆ 24ರಂದು ಅಮೀತ್ ಶಾ ಆಗಮನ

    ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿಂದ ಹಮ್ಮಿಕೊಳ್ಳಲಾಗುವ 4,100 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಾ.24ರಂದು ಕೇಂದ್ರ ಗೃಹ ಸಚಿವ ಅಮೀತ್ ಶಾ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ತಾಲೂಕಿನಲ್ಲಿ ಶಾಸಕ ಕೆ.ಶಿವನಗೌಡ ನಾಯಕ ನೇತೃತ್ವದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಾರಿಗಳನ್ನು ಕೈಗೊಳ್ಳಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎಂದರು.

    ದೇವದುರ್ಗ ತಾಲೂಕಿಲ್ಲಿ 29 ಕುಡಿಯುವ ನೀರಿನ ಕೆರೆಗಳಿಗೆ ನೀರು ಒದಗಿಸುವ ಕಾಮಗಾರಿ, 8 ಏತ ನೀರಾವರಿ ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ಕಲ್ಮಲಾ, ತಿಂಥಿಣಿ ಸೇತುವೆವರೆಗಿನ ರಸ್ತೆ ಮರು ದುರಸ್ತಿ ಕಾಮಗಾರಿ ಸೇರಿದಂತೆ ಒಟ್ಟು 4,100 ಕೋಟಿ ರೂ. ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುತ್ತಿದೆ.

    ಜತೆಗೆ ಮನೆ ಮನೆಗೆ ನೀರೊದಗಿಸುವ 2,300 ಕೋಟಿ ರೂ. ವೆಚ್ಚದ ಜಲಧಾರೆ ಯೋಜನೆ ಕಾಮಗಾರಿಗೂ ಅಮೀತ್ ಶಾ ಶಂಕು ಸ್ಥಾಪನೆ ನಡೆಸಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಜಿಲ್ಲೆಗೆ ಹಾಗೂ ದೇವದುರ್ಗ ತಾಲೂಕಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ.

    ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ಕುರಿತು ಈಗಾಗಲೇ ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಏಮ್ಸ್ ನೀಡಿದೆ. ಆದರೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಹೋಗಿಲ್ಲ. ರಾಜ್ಯ ಸರ್ಕಾರ ಜಿಲ್ಲೆಗೆ ಏಮ್ಸ್ ಮಾದರಿ ಆಸ್ಪತ್ರೆ ಮಂಜೂರು ಮಾಡಿರುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ರಾಜಾ ಅಮರೇಶ್ವರ ನಾಯಕ ಹೇಳಿದರು.

    ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಮುಖಂಡರಾದ ಕೆ.ಎಂ.ಪಾಟೀಲ್, ಕೊಟ್ರೇಶಪ್ಪ ಕೋರಿ, ರಾಮಚಂದ್ರ ಕಡಗೋಳ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts