ಶಿವಮೊಗ್ಗ: ವಕ್ಫ್ ಭೂಮಿ ವಿವಾದ ಸ್ವತಂತ್ರ ಭಾರತದ ಅತಿದೊಡ್ಡ ಹಗರಣ. ವರ್ಷದಿಂದ ವರ್ಷಕ್ಕೆ ವಕ್ಫ್ ಮಂಡಳಿಯ ಆಸ್ತಿ ಗಣನೀಯವಾಗಿ ಬೆಳೆದಿದ್ದೇ ಸೋಜಿಗ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
ಕಾಂಗ್ರೆಸ್‌ನವರು ಒಂದು ಸಮುದಾಯವನ್ನು ತುಷ್ಟೀಕರಣ ಮಾಡುವ ಸಲುವಾಗಿ ಆಡಳಿತ ಯಂತ್ರವನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಕ್ಫ್ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರುವ ಮುನ್ನ ಸಾಧ್ಯವಾದಷ್ಟು ಆಸ್ತಿಯನ್ನು ವಕ್ಫ್ ಮಂಡಳಿ ಹೆಸರಿಗೆ ಮಾಡಿಕೊಡುವ ಹುನ್ನಾರ ಈಗ ಬಯಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ವಕ್ಫ್ ಕಾಯ್ದೆಗೆ ತಿದ್ದುಪಡಿ ಮಾಡಬೇಕು ಎಂದು ನಿರ್ಧರಿಸಿದ ಬಳಿಕ ಎನ್‌ಡಿಎ ವಿರೋಧಿ ಪಕ್ಷಗಳಿಗೆ ಗಾಬರಿಯಾಗಿದೆ. ಜಂಟಿ ಸಂಸದೀಯ ಸಮಿತಿ(ಜೆಪಿಎಸ್) ರಚನೆ ಮಾಡಿದ್ದರೂ ವಕ್ಫ್ ಪರವಾಗಿರುವ ರಾಜಕೀಯ ಪಕ್ಷಗಳ ನಾಯಕರು ಸಮಿತಿ ಸಭೆಯನ್ನೇ ಬಹಿಷ್ಕರಿಸುತ್ತಿದ್ದಾರೆ ಎಂದು ದೂರಿದರು.
ಇದೇ ವರ್ಷ ಏಪ್ರಿಲ್‌ನಲ್ಲಿ 21,500 ಆಸ್ತಿಗಳನ್ನು ವಕ್ಫ್ ಹೆಸರಿಗೆ ಪಹಣಿ ಮಾಡುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸರ್ಕಾರವೇ ಅಧಿಕಾರಿಗಳಿಗೆ ಆದೇಶ ನೀಡಿದೆ. ಮುಜರಾಯಿ ಆಸ್ತಿಗಳನ್ನು ಗುರುತಿಸಲು ಆಸಕ್ತಿ ಇಲ್ಲದಿರುವ ಸರ್ಕಾರ ವಕ್ಫ್ ವಿಚಾರದಲ್ಲಿ ಇನ್ನಿಲ್ಲದ ಕಾಳಜಿ ತೋರುತ್ತಿದೆ ಎಂದು ಟೀಕಿಸಿದರು.
ರೈತರಿಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ವಕ್ಫ್‌ಗೆ ಕೇವಲ ರೈತ ಜಮೀನು ಮಾತ್ರವಲ್ಲ, ಮಠ ಮಂದಿರಗಳ ಜಾಗವನ್ನೂ ಸರ್ಕಾರ ಬರೆದುಕೊಟ್ಟಿದೆ ಎಂದು ಹೇಳಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಲತೇಶ್, ಎಂ.ಬಿ.ಹರಿಕೃಷ್ಣ, ನಗರ ಪ್ರಧಾನ ಕಾರ್ಯದರ್ಶಿ ಸಂತೋಷ್ ಬಳ್ಳೇಕೆರೆ, ಪ್ರಮುಖರಾದ ಅಣ್ಣಪ್ಪ ಇತರರಿದ್ದರು.
ವಕ್ಫ್ ಕಾಯ್ದೆಗೆ ತಿದ್ದುಪಡಿ ಎನ್‌ಡಿಎ ವಿರೋಧಿಗಳಿಗೆ ಭಯ
You Might Also Like
ಮೊಬೈಲ್ ಹಿಡಿದುಕೊಳ್ಳುವ ಸ್ಟೈಲ್ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts
Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…
ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips
Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…
honeymoon destinations : 2024 ರಲ್ಲಿ ನವವಿವಾಹಿತರನ್ನು ಆಕರ್ಷಿಸಿದ ನೆಚ್ಚಿನ ಹನಿಮೂನ್ ತಾಣಗಳು ಇವು..!
honeymoon destinations : ವ್ಯಕ್ತಿಯ ಆದ್ಯತೆಗಳು ಮತ್ತು ಆಯ್ಕೆಗಳು ವರ್ಷಗಳಲ್ಲಿ ಬದಲಾಗುತ್ತವೆ. ಈಗ ನಾವು 2024…