ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಬಸ್ (Bus) ಪ್ರಯಾಣದರ ಏರಿಸುವ ಮೂಲಕ ಜನರಿಗೆ ಶಾಕ್ ಕೊಟ್ಟಿದ್ದ ರಾಜ್ಯ ಸರ್ಕಾರವು, ಇದೀಗ ಮತ್ತೊಮ್ಮೆ ಜನರಿಗೆ ಶಾಕ್ ಕೊಡಲು ಸಜ್ಜಾಗಿ ನಿಂತಿದೆ. ಬಸ್ (Bus) ಮಾತ್ರವಲ್ಲದೇ ನೀರು, ಹಾಲು ಮತ್ತು ಮೆಟ್ರೋ ಟಿಕೆಟ್ ದರವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದ್ದು, ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟುವುದು ಕನ್ಫರ್ಮ್ ಆಗಿದೆ.
ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಕಂಪನಿ (KPTCL), ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ಸೇರಿದಂತೆ ವಿದ್ಯುತ್ ಸರಬರಾಜು ಕಂಪನಿಗಳು ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸೇರಿದಂತೆ ಸಂಬಂಧಿಸಿದಂತೆ ಸಂಸ್ಥೆಗಳು ಈಗಾಗಲೇ ಸರ್ಕಾರಕ್ಕೆ ದರ ಏರಿಕೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ಎರಡನೇ ವಾರದಲ್ಲಿ ಸರ್ಕಾರ ಸಭೆ ಕರೆದಿದೆ.
2014ರ ನಂತರ ನೀರಿನ ದರ ಪರಷ್ಕರಣೆ ಮಾಡದ ಕಾರಣ ಸರ್ಕಾರದ ಮಧ್ಯಸ್ಥಿಕೆಯಲ್ಲೇ ಬಿಲ್ ಹೆಚ್ಚಳ ಮಾಡುವಂತೆ ಜಲಮಂಡಳಿ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ನೀರಿನ ದರ ಹೆಚ್ಚಳ ಸಂಬಂಧ ಈಗಾಗಲೇ ಜಲಮಂಡಳಿಯು ಬೆಂಗಳೂರಿನ 27 ಶಾಸಕರಿಗೆ ಪತ್ರ ಬರೆದಿದ್ದು, ಬೆಂಗಳೂರು ಭಾಗದ ಶಾಸಕರ ಜೊತೆ ಜನವರಿ 2ನೇ ವಾರದಲ್ಲಿ ಡಿಸಿಎಂ, ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸಭೆ ನಡೆಸಲಿದ್ದಾರೆ.
ಸಿಲಿಕಾನ್ ಸಿಟಿಯ ಜೀವನಾಡಿ ಎಂದೇ ಖ್ಯಾತಿ ಪಡೆದಿರುವ ನಮ್ಮ ಮೆಟ್ರೋ ಟಿಕೆಟ್ ದರದಲ್ಲಿ ಕೂಡ ಹೆಚ್ಚಳ ಮಾಡಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಬಿಎಂಆರ್ಸಿಎಲ್ ಸರ್ಕಾರಕ್ಕೆ ಪತ್ರ ಬರೆದಿದೆ. ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಸಂಬಂಧ ಟಿಕೆಟ್ ದರದಲ್ಲಿ ಏರಿಕೆ ಮಾಡುವುದು ಅನಿವಾರ್ಯ ಎಂದು ಹೇಳಲಾಗಿದೆ. ಜನವರಿ ಎರಡನೇ ವಾರದಲ್ಲಿ ನಡೆಯುವ ಬೋರ್ಡ್ ಮೀಟಿಂಗ್ ನಲ್ಲಿ ಹೊಸ ದರ ಜಾರಿಯಾಗುವ ಎಲ್ಲಾ ಸಾಧ್ಯತೆಗಳಿರುವುದಾಗಿ ವರದಿಯಾಗಿದೆ.
ಇದಲ್ಲದೆ ಹಾಲು ಹಾಗೂ ವಿದ್ಯುತ್ ದರದಲ್ಲೀ ಏರಿಕೆ ಮಾಡಲಾಗುತ್ತದೆ ಎಂದು ಹೇಳಲಾಗಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಈ ಸಂಬಂಧ ಸಭೆಗಳು ನಡೆಯಬೇಕಿದ್ದು, ಜನವರಿಯಿಂದಲೇ ಅಧಿಕೃತವಾಗಿ ದರ ಏರಿಕೆಯಾಗುವುದು ಖಚಿತವಾಗಿದೆ. ಒಟ್ಟಿನಲ್ಲಿ ರಾಜ್ಯ ಸರ್ಕಾರವು ಜನರಿಗೆ ಶಾಕ್ ಮೇಲೆ ಶಾಕ್ ಕೊಡಲು ಸಜ್ಜಾಗಿದೆ.
HMPV ಬಗ್ಗೆ ಭಯಪಡುವ ಅಗತ್ಯವಿಲ್ಲ; ಮುನ್ನೆಚ್ಚರಿಕೆ ಕುರಿತು ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದಿಷ್ಟು