More

    ರೈತರಿಂದ ದೆಹಲಿ ಚಲೋ ; ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ MSP ಜಾರಿ ಗ್ಯಾರಂಟಿ: ರಾಹುಲ್​ ಗಾಂಧಿ

    ನವದೆಹಲಿ: ಕನಿಷ್ಠ ಬೆಂಬಲ ಲಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮತ್ತೊಂದು ಹಂತ ತಲುಪಿದೆ. ಇತ್ತ ರೈತರ ಪ್ರತಿಭಟನೆ ಕುರಿತು ಮಾತನಾಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ರಾಹುಲ್​ ಗಾಂಧಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಗೆದ್ದು ಅಧಿಕಾರಕ್ಕೆ ಬಂದಲ್ಲಿ ಎಂಎಸ್​ಪಿ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

    ಇದನ್ನೂ ಓದಿ: ಚುನಾವಣೆಗೆ ಸ್ಫರ್ಧಿಸುವುದಿಲ್ಲ ಸೋನಿಯಾ; ತಾಯಿಯ ಸ್ಥಾನ ತುಂಬಲಿದ್ದಾರೆ ಪ್ರಿಯಾಂಕ

    ರೈತ ಬಂಧುಗಳೇ, ಇಂದು ಐತಿಹಾಸಿಕ ದಿನವಾಗಿದ್ದು, ಸ್ವಾಮಿನಾಥನ್​ ಆಯೋಗದ ವರದಿ ಪ್ರಕಾರ ಕನಿಷ್ಠ ಬೆಂಬಲ ಬೆಲೆ ಕಾನೂನನ್ನು ಜಾರಿ ಮಾಡಲು ಕಾಂಗ್ರೆಸ್​ ನಿರ್ಧರಿಸಿದೆ. ಕನಿಷ್ಠ ಬೆಂಬಲ ಬೆಲೆ ಕಾನೂನು 15 ಕೋಟಿ ರೈತ ಕುಟುಂಬಗಳ ಏಳಿಗೆಯನ್ನು ಖಾತರಿಪಡಿಸುವ ಮೂಲಕ ಅವರ ಜೀವನವನ್ನು ಬದಲಾಯಿಸುತ್ತದೆ.

    ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ ನೀಡುತ್ತಿರುವ ಮೊದಲ ಭರವಸೆ ಇದಾಗಿದ್ದು, ನ್ಯಾಯದ ಹಾದಿಯಲ್ಲಿ ಕಾಂಗ್ರೆಸ್ ನಡೆಯುತ್ತಿದೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದಲ್ಲಿ ಕಿಸಾನ್​ ನ್ಯಾಯ್​ ಗ್ಯಾರಂಟಿ ಮಾಡುವುದಾಗಿ ರಾಹುಲ್​ ಗಾಂಧಿ ಘೋಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts