More

    ದೆಹಲಿ ಹಿಂಸಾಚಾರ: ಕೇಂದ್ರ ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ದೀರ್ಘ ಚರ್ಚೆ

    ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್​ ದೋವಲ್​ ಅವರು ಈಶಾನ್ಯ ದೆಹಲಿಯ ಗಲಭೆ ಪೀಡಿತ ಪ್ರದೇಶದ ಪರಿಸ್ಥಿತಿ ಬಗ್ಗೆ 2 ತಾಸಿಗೂ ಅಧಿಕ ಕಾಲ ಚರ್ಚೆ ನಡೆಸಿದರು.

    ಗಲಭೆ ಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಸಭೆ ನಂತರ ಅಜಿತ್​ ದೋವಲ್​ ತಿಳಿಸಿದರು.

    ಅಜಿತ್​ ದೋವಲ್ 24 ತಾಸುಗಳಲ್ಲಿ ಎರಡು ಬಾರಿಗೆ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಮಂಗಳವಾರ ತಡರಾತ್ರಿ ಅವರು ಗಲಭೆ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ನಂತರ ಗುರುವಾರ ಕೂಡ ಅವರು ಪರಿಶೀಲನೆ ನಡೆಸಿದರು.

    ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಈಶಾನ್ಯ ದೆಹಲಿ ಪ್ರದೇಶದಲ್ಲಿ ಹಿಂಸಾಚಾರ ಸಂಭವಿಸಿ ಇಬ್ಬರು ಪೊಲೀಸರು ಸೇರಿ 32 ಮಂದಿ ಮೃತಪಟ್ಟಿದ್ದಾರೆ. ಗಲಭೆಯಲ್ಲಿ 330 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಭೆ ನಿಯಂತ್ರಣಕ್ಕೆ ಸೇನಾ ತುಕಡಿ ನಿಯೋಜಿಸಲಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts