ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಹೇಳಿದರು.
ಇದನ್ನೂ ಓದಿ: ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ: 14 ವರ್ಷದ ಬಾಲಕನ ಬಂಧನ
ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್ಸೈಟ್ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಮತ್ತು ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್ಸೈಟ್ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದು ಷಾ ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ, ”ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
ಸಿದ್ದರಾಮಯ್ಯಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್.ಅಶೋಕ್