More

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ…

  ಚನ್ನಪಟ್ಟಣ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಇದೇ ಮೊದಲ ಬಾರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬಿಜೆಪಿ ಮತ್ತು ದಳ ನಾಯಕರ ಜೊತೆ ಸರಣಿ ಸಭೆ ನಡೆಸಿ ಗೆಲುವಿಗೆ ಬೇಕಾದ ತಂತ್ರಗಳನ್ನು ನಾಯಕರಿಗೆ ಮನದಟ್ಟು ಮಾಡಿಸಿದ್ದಾರೆ.

  ಇದನ್ನೂ ಓದಿ: ಲೋಕಸಮರ: ವಿದ್ಯುನ್ಮಾನ ಮತಯಂತ್ರದ ವಿರುದ್ಧ ಮದ್ರಾಸ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ ಡಿಎಂಕೆ

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

  ಇಂದು (ಮಂಗಳವಾರ) ರಾಜ್ಯಕ್ಕೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಸತತ ಸಭೆ, ಸಮಾವೇಶಗಳ ಬಳಿಕ ಇದೀಗ ಗೃಹ ಸಚಿವ ಅಮಿತ್ ಶಾ ಡಿಕೆ ಬ್ರದರ್ಸ್​ ಕೋಟೆಗೆ ಭರ್ಜರಿ ಎಂಟ್ರಿ ಕೊಟ್ಟಿದ್ದಾರೆ. ಚನ್ನಪಟ್ಟಣದಲ್ಲಿ ಬೃಹತ್​ ರೋಡ್ ಶೋ ನಡೆಸಿದ್ದಾರೆ.

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

  ಬೆಂಗಳೂರಿನಲ್ಲಿ ಸರಣಿ ಸಭೆ ಮುಗಿಸಿಕೊಂಡು ಅಮಿತ್ ಶಾ ಹೆಲಿಕಾಪ್ಟರ್​ ಮೂಲಕ ರಾಮನಗರ ಜಿಲ್ಲೆಯ ಚನ್ನಪಟ್ಟಣಕ್ಕೆ ಆಗಮಿಸಿದ್ದಾರೆ.

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

  ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಪರ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಅಮಿತ್ ಶಾ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ.

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

   ಒಂದೂವರೆ ಕಿಲೋಮೀಟರ್ ಸಾಗಲಿರುವ ಈ ರೋಡ್‌ಶೋನಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

  ತೆರೆದ ವಾಹನದಲ್ಲಿ ಗೃಹ ಸಚಿವರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಬೆಂಗಳೂರು ಗ್ರಾಮಂತರ ಅಭ್ಯರ್ಥಿ ಸಿಎನ್ ಮಂಜುನಾಥ್ ಮೊದಲ ಸಾಲಿನಲ್ಲಿ ಕಾಣಿಸಿಕೊಂಡಿದ್ದಾರೆ. ವಾಹನದ ಹಿಂಭಾಗದಲ್ಲಿ ನಿಖಿಲ್ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್, ಅಶ್ವತ್ ನಾರಾಯಣ್ ಸೇರಿದಂತೆ ಇತರ ಕೆಲ ಮುಖಂಡರು ಬೃಹತ್ ರೋಡ್ ಶೋ ನಡೆಸಿದ್ದಾರೆ.

  ಡಿಕೆ ಬ್ರದರ್ಸ್​ ಕೋಟೆಯಲ್ಲಿ ಅಮಿತ್ ಶಾ ಬೃಹತ್ ರೋಡ್​ ಶೋ..!ಫೋಟೋಗಳು ಇಲ್ಲಿವೆ...

  ರೋಡ್ ಶೋನಲ್ಲಿ ಕಾರ್ಯಕರ್ತರು ಜೈ ಶ್ರೀರಾಮ್, ವಂದೇ ಮಾತಾರಂ, ಭಾರತ್ ಮಾತಾ ಕಿ ಜೈ ಘೋಷಣೆಗಳು ಮೊಳಗಿದೆ. ರಸ್ತೆಯ ಇಕ್ಕೆಲಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನಿಂತು ಅಮಿತ್ ಶಾಗೆ ಭರ್ಜರಿ ಸ್ವಾಗತ ನೀಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts