ಡಿ.13ಕ್ಕೆ ಬಿಜೆಪಿ ರಾಷ್ಟ್ರ ಘಟಕದ ಪದಾಧಿಕಾರಿಗಳ ಸಭೆ: ಮಹತ್ವ ಪಡೆದ ಸಭೆಯ ಹಿಂದಿನ ಕಾರಣವೇನು?

ನವದೆಹಲಿ: ಬಿಜೆಪಿ ರಾಷ್ಟ್ರ ಘಟಕದ ಅಧ್ಯಕ್ಷ ಅಮಿತ್​ ಶಾ ಅವರು ಡಿ.13 ರಂದು ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಟವಾಗುವ ಎರಡೇ ದಿನಕ್ಕೆ ನಡೆಯುತ್ತಿರುವ ಈ ಸಭೆ ರಾಜಕೀಯವಾಗಿ ಮಹತ್ವ ಪಡೆದುಕೊಳ್ಳುತ್ತಿದೆ.

“ಸಭೆಯಲ್ಲಿ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಪ್ರಮುಖವಾಗಿ ಚರ್ಚೆ ನಡೆಸಲಾಗುತ್ತಿದೆ. ಫಲಿತಾಂಶದ ಆಧಾರದ ಮೇಲೆ ಮುಂದಿನ ಲೋಕಸಭೆ ಚುನಾವಣೆಗೆ ಕೈಗೊಳ್ಳಬೇಕಾದ ತಯಾರಿ ಮತ್ತು ರಣತಂತ್ರಗಳ ಕುರಿತೂ ಚರ್ಚಿಸಲಾಗುತ್ತಿದೆ,” ಎಂದು ಹೆಸರು ಹೇಳಲಿಚ್ಚಿಸದ ನಾಯಕರೊಬ್ಬರು ರಾಷ್ಟ್ರೀಯ ಸುದ್ದಿ ವಾಹಿನಿ ಎಎನ್​ಐಗೆ ತಿಳಿಸಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಮತಗಟ್ಟೆ ಸಮೀಕ್ಷೆಗಳಲ್ಲಿ ಬಿಜೆಪಿಗೆ ಹಿನ್ನಡೆಯಾಗುವ ಬಗ್ಗೆ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಅಮಿತ್​ ಶಾ ಅವರು ಶನಿವಾರ ಸಂಜೆ ದೆಹಲಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿದರು. ಈ ಸಭೆಯಲ್ಲಿ ಡಿ.13ರ ಮಧ್ಯಾಹ್ನ 2 ಗಂಟೆಗೆ ಪಕ್ಷದ ಪದಾಧಿಕಾರಿಗಳ ಸಭೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.