22.5 C
Bengaluru
Sunday, January 19, 2020

ಸಂವಿಧಾನದ 370ನೇ ಪರಿಚ್ಛೇದ ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ: ಅಮಿತ್​ ಷಾ ವಿವರಣೆ

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರಕ್ಕೆ ಎಲ್ಲ ಅಧಿಕಾರಗಳಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಷಾ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮಿರಕ್ಕೆ ವಿಶೇಷ ಸ್ಥಾನಮಾನ ಮತ್ತು ವಿಶೇಷಾಧಿಕಾರ ನೀಡುವ ಸಂವಿಧಾನದ 370 ಮತ್ತು 35ಎ ಪರಿಚ್ಛೇದಗಳನ್ನು ರದ್ದುಗೊಳಿಸುವ ಕುರಿತು ಲೋಕಸಭೆಯಲ್ಲಿ ಹೇಳಿಕೆ ನೀಡಿದ ಬಳಿಕ ಅಮಿತ್​ ಷಾ, ಇಂಥ ಒಂದು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೇಳಿದರು.

370ನೇ ಪರಿಚ್ಛೇದದ 3ನೇ ವಿಧಿಯ ಪ್ರಕಾರ, ಈ ಪರಿಚ್ಛೇದದಲ್ಲಿನ ಯಾವುದೇ ನಿಯಮಗಳನ್ನು ರದ್ದುಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರಪತಿಯವರು ಸಾರ್ವಜನಿಕ ಅಧಿಸೂಚನೆ ಮೂಲಕ ಇಂತಿಂಥ ನಿಯಮಗಳು ರದ್ದುಗೊಂಡಿವೆ ಎಂದು ಅಥವಾ ನಿರ್ದಿಷ್ಟ ತಿದ್ದುಪಡಿಯೊಂದಿಗೆ ಅಥವಾ ಮಾರ್ಪಡಿನೊಂದಿಗೆ ಇಂಥ ದಿನಾಂಕದಿಂದ ಜಾರಿಗೆ ಬರುವುದಾಗಿ ಹೇಳಬಹುದು; 2ನೇ ಉಪವಾಕ್ಯದಲ್ಲಿ ಹೇಳಲಾಗಿರುವಂತೆ ಈ ರೀತಿಯ ಅಧಿಸೂಚನೆ ಹೊರಡಿಸುವಂತೆ ಹೇಳಿ ರಾಜ್ಯ ಸರ್ಕಾರ ಶಿಫಾರಸು ಮಾಡಿರಬೇಕು.

ಇದರರ್ಥದಲ್ಲಿ 370ನೇ ಪರಿಚ್ಛೇದದ 3ನೇ ವಿಧಿಯ ಪ್ರಕಾರ ರಾಷ್ಟ್ರಪತಿಯವರು ಇಂಥ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರದ ಶಿಫಾರಸು ತುಂಬಾ ಅಗತ್ಯವೆಂಬುದು ಸ್ಪಷ್ಟವಾಗುತ್ತದೆ. ಆದರೆ, ರಾಜ್ಯ ವಿಧಾನಸಭೆಯಲ್ಲಿ ಚುನಾಯಿತ ಸರ್ಕಾರ ಇಲ್ಲವೆಂದಾಗ ರಾಜ್ಯದ ಆಡಳಿತದ ಹೊಣೆಗಾರಿಕೆ ಲೋಕಸಭೆ ಅಥವಾ ರಾಜ್ಯಸಭೆಯದ್ದಾಗುತ್ತದೆ. ಹಾಗಾಗಿ, ಸಂವಿಧಾನದ 370 ಮತ್ತು 35ಎ ಪರಿಚ್ಛೇದಗಳನ್ನು ರದ್ದುಗೊಳಿಸುವಂತೆ ರಾಷ್ಟ್ರಪತಿಯವರಿಗೆ ಶಿಫಾರಸು ಮಾಡಲು ಸಂಸತ್​ಗೆ ಅಧಿಕಾರವಿದೆ ಎಂದು ಅಮಿತ್​ ಷಾ ವಿವರಿಸಿದರು.

ರಾಜ್ಯದಲ್ಲಿ ಆಡಳಿತದಲ್ಲಿದ್ದ ಚುನಾಯಿತ ಸರ್ಕಾರವನ್ನು ಕಳೆದ ವರ್ಷದ ನವೆಂಬರ್​ನಲ್ಲಿ ಅಮಾನತಿನಲ್ಲಿಡಲಾಗಿದೆ. ಬಳಿಕ ಅಲ್ಲಿ ರಾಜ್ಯಪಾಲರ ಆಡಳಿತವನ್ನು ಜಾರಿಗೊಳಿಸಲಾಗಿದೆ. ಬಳಿಕ ಸರ್ಕಾರವನ್ನು ಬರ್ಖಾಸ್ತುಗೊಳಿಸಲಾಗಿದೆ. ಇದರಿಂದಾಗಿ ಸಂವಿಧಾನದ 370ನೇ ಪರಿಚ್ಛೇದವನ್ನು ರದ್ದುಗೊಳಿಸುವ ಕುರಿತು ತನ್ನ ಅಭಿಪ್ರಾಯವನ್ನು ತಿಳಿಸಲು ಮತ್ತು ಸೂಕ್ತ ಶಿಫಾರಸು ಮಾಡಲು ಸರ್ಕಾರವೇ ಇಲ್ಲವಾಯಿತು. ಇದರರ್ಥದಲ್ಲಿ ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಮತ್ತು ಸಂವಿಧಾನದ ಪರಿಚ್ಛೇದಗಳನ್ನು ರದ್ದುಗೊಳಿಸುವ ಬಗ್ಗೆ ನಿರ್ಧರಿಸಲು ಸಂಸತ್​ಗೆ ಸಂಪೂರ್ಣ ಅಧಿಕಾರ ದೊರೆತಂತಾಯಿತು ಎಂದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...