More

    ಪ್ರಜ್ವಲ್​ನನ್ನು ವಿದೇಶದಿಂದ ಕರೆತರಲು ಅಮಿತ್ ಷಾಗೆ ಒತ್ತಾಯ

    ಹುಬ್ಬಳ್ಳಿ : ಪೆನ್​ಡ್ರೖೆವ್ ಹಗರಣ ಬೆಳಕಿಗೆ ಬರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಜವಾಬ್ದಾರಿ ಇದ್ದಿದ್ದರೆ ಪ್ರಜ್ವಲ್ ಪೊಲೀಸರಿಗೆ ಶರಣಾಗುವಂತೆ ಮಾಡಬೇಕಿತ್ತು. ಎಸ್​ಐಟಿ ತನಿಖೆಗೆ ಸಹಕಾರ ನೀಡಬೇಕಿತ್ತು ಎಂದು ಸಚಿವ ದಿನೇಶ ಗುಂಡೂರಾವ್ ಹೇಳಿದರು.

    ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣನನ್ನು ವಿದೇಶದಿಂದ ಕರಿಸಿಕೊಳ್ಳುವ ಕೆಲಸವನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಡಬೇಕು ಎಂದು ಒತ್ತಾಯಿಸಿದರು.

    ವಿದೇಶಕ್ಕೆ ಪ್ರಯಾಣಿಸುವ ಮುಂಚೆಯೇ ಪ್ರಜ್ವಲ್ ರೇವಣನನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಬೇಕಿತ್ತು. ಆದರೆ, ಜೆಡಿಎಸ್ ಒತ್ತಡದಿಂದಾಗಿ ಕೇಂದ್ರ ಸರ್ಕಾರ ಆತನನ್ನು ಬಂಧಿಸಿರಲಿಕ್ಕಿಲ್ಲ ಎಂದು ಶಂಕೆ ವ್ಯಕ್ತಪಡಿಸಿದರು.

    ನೂರಾರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆದ ಈ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ಆದರೆ, ಬಿಜೆಪಿಯವರು ಈ ಪ್ರಕರಣದಲ್ಲಿ ಚಕಾರ ಎತ್ತುತ್ತಿಲ್ಲ. ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಂಡ ಬಿಜೆಪಿ, ಈ ಪ್ರಕರಣದಲ್ಲಿ ಏಕೆ ಮಾತನಾಡುತ್ತಿಲ್ಲ ? ಎಂದು ಪ್ರಶ್ನಿಸಿದರು.

    ಸಂಸದ ಪ್ರಜ್ವಲ ರೇವಣ್ಣ ಬಗ್ಗೆ ಬಿಜೆಪಿಯ ಮುಖಂಡರೊಬ್ಬರು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಗ್ಗೆ ಪತ್ರ ಬರೆದಿದ್ದರು. ಆದರೂ, ಬಿಜೆಪಿಯವರು ಪ್ರಜ್ವಲ್ ರೇವಣ್ಣ ಪರ ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಕೇಂದ್ರದಿಂದ ರಾಜ್ಯಕ್ಕೆ ಮತ್ತಷ್ಟು ಎನ್​ಡಿಆರ್​ಎಫ್ ಅನುದಾನ ಬರಬೇಕಿದೆ. ಈ ಕುರಿತು ಹೋರಾಟ ಮುಂದುವರೆಸಲಾಗುವುದು. ಮತ್ತೆ ನ್ಯಾಯಾಲಯದ ಮೆಟ್ಟಿಲು ಏರಲಾಗುವುದು ಎಂದು ತಿಳಿಸಿದರು.

    ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆದ 14 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ವಾತಾವರಣ ಇದೆ. 2ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬಾಕಿ 14 ಕ್ಷೇತ್ರಗಳಲ್ಲಿಯೂ ವಾತಾವರಣ ಬಿಜೆಪಿಗೆ ತದ್ವಿರುದ್ಧವಾಗಿದೆ ಎಂದರು.

    ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕಿ ಕುಸುಮಾವತಿ ಶಿವಳ್ಳಿ, ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ ಹಾಗೂ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts