ಬಿಜೆಪಿ ರಾಷ್ಟ್ರಾಧ್ಯಕ್ಷರ ನಿರ್ದೇಶನದ ಮೇರೆಗೆ ಫಡ್ನವೀಸ್ "ಮಹಾ" ಸರ್ಕಾರದಲ್ಲಿ ಸೇರ್ಪಡೆ: ಅಮಿತ್​ ಶಾ

Amithsha-fadnavis
Published on

ನವದೆಹಲಿ: ಮಹಾರಾಷ್ಟ್ರದ ಹಿತಾಸಕ್ತಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ಮಹಾರಾಷ್ಟ್ರ ಸರ್ಕಾರದಲ್ಲಿ ದೇವೇಂದ್ರ ಫಡ್ನವಿಸ್​ ಸೇರಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿರುವ ಅಮಿತ್​ ಶಾ, ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದ್ದರು.

ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.

ಫಡ್ನವಿಸ್​ ಸರ್ಕಾರದಲ್ಲಿ ಸೇರ್ಪಡೆಯಾಗುವ ಮೂಲಕ ರಾಜ್ಯಕ್ಕಾಗಿ ಅವರ ನಿಜವಾದ ಅಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ನಿರ್ಧಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net