More

    ಪ್ರತಿಭಟನಾಕಾರರ ಮೇಲೆ ಫೈರಿಂಗ್​ ಮಾಡಿದವನ ವಿರುದ್ಧ ಕಠಿಣ ಕ್ರಮಕ್ಕೆ ಆದೇಶ ನೀಡಿದ್ದೇನೆ, ಆರೋಪಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಗೃಹ ಸಚಿವ ಅಮಿತ್​ ಷಾ

    ನವದೆಹಲಿ: ನಗರದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಯಾವ ಕಾರಣಕ್ಕೂ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಗೃಹ ಸಚಿವ ಅಮಿತ್​ ಷಾ ತಿಳಿಸಿದ್ದಾರೆ.

    ಈ ಅಪ್ರಾಪ್ತ ಎನ್ನಲಾಗಿದ್ದು ಪ್ರತಿಭಟನಾಕಾರರ ಮೇಲೆ ಇಂದು ಗುಂಡಿನ ದಾಳಿ ನಡೆಸಿದ್ದಾನೆ. ಆತ ಗುಂಡು ಹಾರಿಸುವುದಕ್ಕೂ ಮೊದಲು, ಯಾರಿಗೆ ಸ್ವಾತಂತ್ರ್ಯ ಬೇಕು…ನಾನು ಕೊಡುತ್ತೇನೆ ಎಂದು ಘೋಷಣೆ ಕೂಗಿದ್ದಾಗಿ ವರದಿಯಾಗಿದೆ. ಅಲ್ಲದೆ ವಿಡಿಯೋ ಕೂಡ ವೈರಲ್​ ಆಗಿದೆ. ಈ ಗುಂಡಿನ ದಾಳಿಯಲ್ಲಿ ಯೂನಿವರ್ಸಿಟಿಯ ವಿದ್ಯಾರ್ಥಿಯೋರ್ವ ಗಾಯಗೊಂಡಿದ್ದಾಗಿ ವರದಿಯಾಗಿದೆ.

    ಘಟನೆ ಬಗ್ಗೆ ಅಮಿತ್​ ಷಾ ಪ್ರತಿಕ್ರಿಯೆ ನೀಡಿದ್ದು, ನಾನು ದೆಹಲಿ ಪೊಲೀಸ್​ ಕಮಿಷನರ್​ ಬಳಿ ಮಾತನಾಡಿದ್ದೇನೆ. ಗುಂಡಿನ ದಾಳಿ ನಡೆಸಿದವನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಇಂತಹ ಕೃತ್ಯಗಳನ್ನು ಕೇಂದ್ರ ಸರ್ಕಾರ ಸಹಿಸಿಕೊಳ್ಳುವುದಿಲ್ಲ. ಗಂಭೀರವಾಗಿ ಪರಿಗಣಿಸಲಾಗುವುದು ಹಾಗೂ ಆರೋಪಿ ಯಾವ ಕಾರಣಕ್ಕೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

    ಜಾಮಿಯಾ ಮಿಲಿಯಾ ಬಳಿ ಅಪರಿಚಿತ ಗುಂಡಿನ ದಾಳಿ ನಡೆಸಿದ ಬೆನ್ನಲ್ಲೇ ಟ್ವೀಟ್​ ಮಾಡಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರು, ದೆಹಲಿಯಲ್ಲಿ ಏನಾಗುತ್ತಿದೆ? ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ. ದಯವಿಟ್ಟು ನಗರದ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಿ ಎಂದು ಗೃಹಸಚಿವರನ್ನು ಒತ್ತಾಯಿಸಿದ್ದರು.

    ಫೈರಿಂಗ್​ ಮಾಡಿದವನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಆತ ಗುಂಡು ಹಾರಿಸಿದ ವೇಳೆ ಸ್ಥಳದಲ್ಲಿದ್ದ ಎಲ್ಲರೂ ಭಯಭೀತರಾಗಿದ್ದರು. ಮಾಧ್ಯಮಗಳಲ್ಲಿ ಕೂಡ ದೊಡ್ಡ ಮಟ್ಟದ ಸುದ್ದಿಯಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts