ಶೂಟಿಂಗ್ ವೇಳೆ ನಟ ಅಮಿತಾಭ್ ಬಚ್ಚನ್​ಗೆ ಗಾಯ; ಆಸ್ಪತ್ರೆಗೆ ದಾಖಲು

Amitabh Bachchan
Published on

ಆಂಧ್ರಪ್ರದೇಶ: ಹಿರಿಯ ಬಾಲಿವುಡ್ ನಟ ಅಮಿತಾಭ್ ಬಚ್ಚನ್​ ಅವರು ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆ ಸೇರಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್​ನಲ್ಲಿ ಶೂಟಿಂಗ್ ನಡೆಯುತ್ತಿದ್ದಾಗ ಗಾಯಗೊಂಡಿದ್ದಾರೆ. ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಗಾಯಗೊಂಡಿರುವ ಅಮಿತಾಭ್ ಬಚ್ಚನ್ ಅವರಿಗೆ ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ಸಲಹೆಯಂತೆ ಸಿಟಿ ಸ್ಕ್ಯಾನ್ ಮಾಡಲಾಗಿದೆ.

ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ಅಮಿತಾಬ್ ಬಚ್ಚನ್ ಬಿದ್ದು, ಬಲ ಭಾಗದ ಪಕ್ಕೆಲುಬಿನ ಸ್ನಾಯುವಿಗೆ ಗಾಯಗೊಂಡಿದ್ದಾರೆ. ಕೂಡಲೇ ಚಿತ್ರೀಕರಣವನ್ನು ಅರ್ಧದಲ್ಲಿ ಮೊಟಕುಗೊಳಿಸಿಗೆ, ಅಮಿತಾಬ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪಾಯದಿಂದ ಪಾರಾಗಿದ್ದು, ಒಂದು ವಾರಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net