ಬಾಲಿವುಡ್​ ನಟ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

Amitabh Bachchan
Published on

ಮುಂಬೈ: ಬಾಲಿವುಡ್​​ನಟ ಖ್ಯಾತ ನಟ ಅಮಿತಾ ಬಚ್ಚನ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿಯೊಂದು ಮೂಲಗಳಿಂದ ತಿಳಿದು ಬಂದಿದೆ.

ಲೆಜೆಂಡರಿ ನಟ  ಅಮಿತಾ ಬಚ್ಚನ್​​ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಮಿತಾಭ್ ಅವರಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಬೆನ್ನಲ್ಲೇ ಅವರನ್ನು  ಶುಕ್ರವಾರ ಮುಂಜಾನೆ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಒಟ್ಟಿನಲ್ಲಿ ಅವರ ಆರೋಗ್ಯದ ಕುರಿತು ಆಸ್ಪತ್ರೆ ಅಥವಾ ಕುಟುಂಬದವರು ಹೆಲ್ತ್​ ಅಪ್​ಡೇಟ್​ ನೀಡಲಿ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದಾರೆ.

81ರ ವಯಸ್ಸಿನ ಅಮಿತಾಭ್ ದಣಿವರಿಯದ ಜೀವ. ಮೊನ್ನೆಯಷ್ಟೇ ಅವರು ಕಲ್ಕಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮುಂಬೈಗೆ  ಆಗಮಿಸಿದ್ದರು. ಸಂಪೂರ್ಣ ಶೂಟಿಂಗ್ ಮುಗಿಸಿಕೊಂಡು ಬಂದಿರುವುದಾಗಿ ತಿಳಿಸಿದ್ದಾರೆ. ಸತತವಾಗಿ ಕಲ್ಕಿ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದ ಅವರು, ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net