ಅಂಕಣ

'ಕಾಂಗ್ರೆಸ್​ನಿಂದ ಹಿಂದೂ- ಮುಸ್ಲಿಮರ ನಡುವೆ ಒಡಕು ಮೂಡಿಸಲು ಯತ್ನ': ರಾಜನಾಥ್ ಸಿಂಗ್

ನವದೆಹಲಿ: ಚುನಾವಣಾ ಲಾಭಕ್ಕಾಗಿ ಹಿಂದೂ ಮತ್ತು ಮುಸ್ಲಿmr ನಡುವೆ ಒಡಕು ಮೂಡಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಧಾರ್ಮಿಕ ನೆಲೆಯಲ್ಲಿ ಉದ್ವಿಗ್ನತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅದು ಸಾಮಾಜಿಕ ಸಾಮರಸ್ಯವನ್ನು ಕದಡಲು ಬಯಸುತ್ತದೆ. ಕಾಂಗ್ರೆಸ್ಸಿಗರು ಮುಸ್ಲಿಂ ಸಮುದಾಯವನ್ನು ಕೇವಲ ಓಟ್ ಬ್ಯಾಂಕ್ ಆಗಿ ನೋಡುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ವಿಭಜಿಸಿ ಸರ್ಕಾರ ರಚಿಸಲು ಬಯಸುತ್ತಾರೆ. ಕಾಂಗ್ರೆಸ್ ಅದನ್ನು ಯಾವಾಗಲೂ ಮಾಡಿಕೊಂಡು ಬಂದಿದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‍ಗೆ ನನ್ನದೊಂದು ಸಲಹೆ ಇದೆ, ಅವರು ಸರ್ಕಾರ ರಚನೆಗಾಗಿ ಮಾತ್ರ ರಾಜಕೀಯ ಮಾಡಬಾರದು. ರಾಜಕೀಯದ ಗುರಿ ರಾಷ್ಟ್ರ ನಿರ್ಮಾಣಕ್ಕಾಗಿ ಇರಬೇಕು ಎಂದರು