ಲಖನೌ: ಲೋಕಸಭಾ ಚುನಾವಣೆಯಲ್ಲಿ INDIA ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ದಾಖಲಿಸಲಿದೆ. ಆದರೆ ಎನ್ ಡಿಎ 200 ಸ್ಥಾನಗಳನ್ನು ಮಾತ್ರ ಗಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ:
ಉತ್ತರ ಪ್ರದೇಶದ ಲಖನೌದಲ್ಲಿ ಕೈಗೆ ಪೆಟ್ಟು.. ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಐಶ್ವರ್ಯ ರೈ ಹೆಜ್ಜೆ..! ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ‘ಇಂಡಿಯಾ ಮೈತ್ರಿಕೂಟವು 300 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತದೆ. ಎನ್ ಡಿಎ 200 ರ ಆಸುಪಾಸಿನಲ್ಲಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.
ನಾವು ಸಾಮೂಹಿಕ ನಾಯಕತ್ವವನ್ನು ನಂಬುತ್ತೇವೆ. ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೆ. ಫಲಿತಾಂಶದ ಬಳಿಕ ಸರ್ಕಾರ ರಚಿಸುವುದು ಹಾಗೂ ಪ್ರಧಾನಿ ಆಯ್ಕೆಗೆ ಒಟ್ಟಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಡಿ.ಕೆ. ಶಿವಕುಮಾರ್, ಕಪ್ಪುಹಣ, ರೈತರ ಆದಾಯ ಮತ್ತು ನಿರುದ್ಯೋಗಕ್ಕೆ ಬಿಜೆಪಿ ಹೊಣೆ ಹೊರಬೇಕಾಗುತ್ತದೆ ಎಂದು ಹೇಳಿದರು.