ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಪಬ್ಲಿಕ್ ಪರೀಕ್ಷೆ ಬದಲು ಜಾರಿಗೆ ತಂದಿರುವ ಸಾಮಾನ್ಯ ಮೌಲ್ಯಾಂಕನ ಪರೀಕ್ಷೆಯನ್ನು ಮಾರ್ಚ್ 2 ನೇ ವಾರ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ತೀರ್ಮಾನ ಮಾಡಿರುವುದು ಸ್ವಾಗತಾರ್ಹ.
ಫೆಬ್ರವರಿ 5ರ ಒಳಗೆ ವಿದ್ಯಾರ್ಥಿಗಳ ಸಂಖ್ಯೆ, ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ, ಮಾಧ್ಯಮ ಸೇರಿದಂತೆ ಸಂಪೂರ್ಣ ಮಾಹಿತಿಗಳನ್ನ ಸ್ಯಾಟ್ಸ್ ತಂತ್ರಾಂಶದ ಮೂಲಕ ಅಪ್ಲೋಡ್ ಮಾಡಲು ಸೂಚನೆ ನೀಡಿರುವುದು ಒಳ್ಳೆಯ ಬೆಳವಣಿಗೆ. ಆದರೆ, ಒಂದು ವೇಳೆ ವಿದ್ಯಾರ್ಥಿಗಳ ಮಾಹಿತಿ ತಪ್ಪಿಹೋದರೆ ಅದಕ್ಕೆ ಶಾಲೆ ಮತ್ತು ಶಿಕ್ಷಕರೇ ಹೊಣೆಯಾಗಲಿದ್ದಾರೆ ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿರುವುದು ತುಸು ಬೇಸರ ತರುವಂತಹದು.
ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಶೈಕ್ಷಣಿಕ ಗುಣಮಟ್ಟ ಅಳೆದು, ಯಾವ ವಿಷಯದಲ್ಲಿ ವಿದ್ಯಾರ್ಥಿ ವೀಕ್ ಇರುತ್ತಾನೋ ಅ ವಿಷಯದ ಮೇಲೆ ಹೆಚ್ಚು ಗಮನ ಕೊಟ್ಟು ಆತನಿಗೆ ಅಭ್ಯಾಸ ಮಾಡಿಸುವುದಾಗಿದೆ ಎಂಬುದು ಪಾಲಕರಿಗೆ ಸಂತೋಷ ತರುವಂತಹದು. ಜಿಲ್ಲಾ ಮಟ್ಟದಲ್ಲಿ ಶಿಕ್ಷಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುವುದು ಮತ್ತು ಶಿಕ್ಷಣ ಇಲಾಖೆ ಪ್ರಶ್ನೆಪತ್ರಿಕೆ ತಯಾರು ಮಾಡುವುದು ಉತ್ತಮ ಪದ್ಧತಿ.
| ವಿಜಯ್ ಕುಮಾರ್ ಎಚ್.ಕೆ., ಶಕ್ತಿನಗರ