ನಾರಾಯಣಪುರ: ಛತ್ತೀಸ್‌ಗಢದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲೀಯರು ಪ್ರಾಣ ಕಳೆದುಕೊಂಡಿದ್ದಾರೆ.
ನಾರಾಯಣಪುರ - ದಾಂತೇವಾಡ ಜಿಲ್ಲೆಗಳ ಗಡಿಭಾಗದ ಗೋಬೆಲ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಮಾವೋವಾದಿಗಳ ಚಲನವಲನಗಳ ಬಗ್ಗೆ ಮಾಹಿತಿ ಪಡೆದ ನಂತರ, ಸ್ಥಳೀಯ ಪೊಲೀಸರು ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸರು ( ಐಟಿಬಿಪಿ ) ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.
ಈ ಸಂದರ್ಭದಲ್ಲಿ ನಕ್ಸಲೀಯರು ಸಹ ಪ್ರತಿರೋಧ ತೋರಿದ್ದು, ಗುಂಡಿನ ದಾಳಿ ತೀವ್ರಗೊಳ್ಳುತ್ತಿದ್ದಂತೆ ಏಳು ನಕ್ಸಲೀಯರು ಮೃತಪಟ್ಟಿದ್ದಾರೆ. ಮೃತರನ್ನು ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ.