Astrology: ಸೂರ್ಯನು ತನ್ನ ಪಥವನ್ನು ಬದಲಾಯಿಸುತ್ತಲೇ ಇರುತ್ತಾನೆ. ಜ್ಯೋತಿಷ್ಯದ ಪ್ರಕಾರ, ಇಂದು ಸೂರ್ಯನು ಮೇಷ ರಾಶಿಯನ್ನು ಪ್ರವೇಶಿಸುತ್ತಾನೆ. ಈಗಾಗಲೇ ಶುಕ್ರನು ಮೊದಲಿನಿಂದಲೂ ಆಳ್ವಿಕೆ ನಡೆಸುತ್ತಿದ್ದಾನೆ. ಸೂರ್ಯ ಮತ್ತು ಶುಕ್ರರ ಸಂಯೋಜನೆಯು ರಾಜಯೋಗವನ್ನು ಸೃಷ್ಟಿಸುತ್ತದೆ ಎಂದು ಹೇಳಲಾಗುತ್ತದೆ. ಆದಾಗ್ಯೂ, ಇದು ಕೆಲವು ರಾಶಿಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ದರೆ, ಆ ರಾಶಿಗಳು ಯಾವುದು ಎಂದು ನೋಡೋಣ ಬನ್ನಿ...
ಮೇಷ ರಾಶಿ
ಶುಕ್ರಾದಿತ್ಯ ರಾಜಯೋಗವು ಮೇಷ ರಾಶಿಯವರಿಗೆ ಅನುಕೂಲವಾಗಿರುತ್ತದೆ. ಈ ಸಮಯದಲ್ಲಿ ವೃತ್ತಿಜೀವನದಲ್ಲಿ ಹೊಸ ಭರವಸೆಗಳು ಮೂಡಿಬರಲಿವೆ. ಹಳೆಯ ಹೂಡಿಕೆಗಳು ಲಾಭವನ್ನು ನೀಡಬಲ್ಲವು. ಈ ಸಮಯದಲ್ಲಿ ಗೌರವ, ಸ್ವಾಭಿಮಾನ ಹೆಚ್ಚಾಗಲಿದೆ. ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮೂಡಲಿದೆ.
ಸಿಂಹ ರಾಶಿ
ಈ ರಾಶಿಯವರಿಗೆ ಶುಕ್ರಾದಿತ್ಯ ರಾಜಯೋಗವು ಶುಭವಾಗಿರುತ್ತದೆ. ಕೆಲಸದಲ್ಲಿ ಮುನ್ನಣೆ ಸಾಧಿಸಲಿದ್ದೀರಿ. ಆರ್ಥಿಕ ಪರಿಸ್ಥಿತಿಗಳು ಸುಧಾರಿಸಲಿದ್ದು, ಚಿಂತೆಯಿಲ್ಲದೇ ಬದುಕನ್ನು ನಡೆಸಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳಲಿದ್ದೀರಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲಿದ್ದೀರಿ. ಕುಟುಂಬದಲ್ಲಿ ಸಂತೋಷದ ವಾತಾವರಣವಿರಲಿದೆ.
ಕರ್ಕಾಟಕ ರಾಶಿ
ಈ ಶುಕ್ರಾದಿತ್ಯ ರಾಜಯೋಗವು ವೃತ್ತಿ ಮತ್ತು ವ್ಯವಹಾರಕ್ಕೆ ಶುಭವೆಂದು ಸಾಬೀತುಪಡಿಸಬಹುದಾಗಿದೆ. ಅನೇಕ ದಿನಗಳಿಂದ ಬಾಕಿ ಇದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಉದ್ಯೋಗ ಹುಡುಕುತ್ತಿರುವವರಿಗೆ ಒಳ್ಳೆಯ ಕೆಲಸಗಳು ಸಿಗಲಿವೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದ್ದು, ಶುಭ ಸಮಾರಂಭಗಳು ನಡೆಯಲಿವೆ. ವಿವಾಹವಾಗದವರಿಗೆ ಕಂಕಣ ಬಲ ಕೂಡಿ ಬರಲಿದೆ (ಏಜೆನ್ಸೀಸ್).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು/ ಪಂಚಾಂಗಗಳು/ ನಂಬಿಕೆಗಳು/ ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.