Astrology (ಸಾಂದರ್ಭಿಕ ಚಿತ್ರ)
Astrology: ಇಂದು ಮಧ್ಯಾಹ್ನ 3:37 ಕ್ಕೆ ಮಂಗಳ ಗ್ರಹವು ಮೀನ ರಾಶಿಯನ್ನು ಪ್ರವೇಶಿಸಲಿದೆ. ಮಂಗಳನು ಮೇ 11 ರವರೆಗೂ ಅದೇ ರಾಶಿಯಲ್ಲಿ ನೆಲೆಗೊಳ್ಳುತ್ತಾನೆ. ಜ್ಯೋತಿಷ್ಯದಲ್ಲಿ, ಮಂಗಳವನ್ನು ಉತ್ಸಾಹ, ಧೈರ್ಯಕ್ಕೆ ಶಕ್ತಿ ನೀಡುವ ಗ್ರಹವೆಂದು ಕರೆಯಲಾಗುತ್ತದೆ. ಮತ್ತೊಂದೆಡೆ ಮೀನ ರಾಶಿಯು ಶಾಂತಿ, ತಿಳುವಳಿಕೆ ಮತ್ತು ಭಾವನೆಗಳೊಂದಿಗೆ ಸಂಬಂಧ ಹೊಂದಿದೆ ಎನ್ನಲಾಗುತ್ತದೆ.
ಆದ್ದರಿಂದ, ಈ ಸಮಯದಲ್ಲಿ ವಿವೇಚನೆಯಿಲ್ಲದೇ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕಿಂತ ನಿಧಾನವಾಗಿ ಬುದ್ಧಿವಂತಿಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮುಖ್ಯ ಎಂದು ಹೇಳಲಾಗುತ್ತದೆ. ಈ ಸಮಯವು ಅನೇಕರಿಗೆ ಹೊಸ ಆರಂಭಗಳು, ಪ್ರಗತಿ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ. ನಿರ್ದಿಷ್ಟವಾಗಿ ಹೇಳುವುದಾರೆ, ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಉತ್ತಮ ಫಲಿತಾಂಶವನ್ನು ಸೂಚಿಸುತ್ತದೆ. ಹಾಗಿದ್ದರೆ, ಈ ಮಂಗಳನ ಸಂಚಾರವು ಯಾವ ರಾಶಿಯವರಿಗೆ ಪ್ರಯೋಜನ ಎಂದು ನೋಡೋಣ ಬನ್ನಿ...
ಕರ್ಕಾಟಕ ರಾಶಿ
ಈ ಅವಧಿಯು ಕರ್ಕಾಟಕ ರಾಶಿಯವರಿಗೆ ಅದೃಷ್ಟ ತರುವಂತಹ ಸಮಯವಾಗಿದೆ. ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ಬರುವಂತಹ ಸಮಯ ಇದಾಗಿದೆ. ಬಾಕಿ ಇದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಆರ್ಥಿಕ ಪರಿಸ್ಥಿತಿಯೂ ಸುಧಾರಿಸಲಿದೆ. ಕುಟುಂದೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.
ಸಿಂಹ ರಾಶಿ
ಈ ಸಮಯ ಸಿಂಹ ರಾಶಿಯವರಿಗೆ ಬದಲಾವಣೆ ಮತ್ತು ಅವಕಾಶವನ್ನು ತರುವಂತಹ ಸಮಯ ಇದಾಗಿದೆ. ವೃತ್ತಿಜೀವನದಲ್ಲಿ ಹೊಸ ಬದಲಾವಣೆಗಳನ್ನು ಕಾಣಬಹುದು. ಹಳೆಯ ಹೂಡಿಕೆಗಳು ಲಾಭವನ್ನು ನೀಡಲಿವೆ. ಕುಟುಂಬದೊಂದಿಗೆ ಸಂಬಂಧಗಳು ಸುಧಾರಿಸಲಿವೆ. ಹಳೆಯ ಸಮಸ್ಯೆಗಳಿಗೆ ಪರಿಹಾರ ದೊರೆಯಲಿವೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.
ಮೀನ ರಾಶಿ
ಮೀನ ರಾಶಿಯವರಿಗೆ ಈ ಸಮಯ ಬಹಳ ವಿಶೇಷವಾಗಿರುತ್ತದೆ. ಸ್ವಂತ ನಿರ್ಧಾರಗಳನ್ನು ತೆಗೆದುಕೊಂಡು ಜೀವನ ನಡೆಸಲಿದ್ದೀರಿ. ಆರ್ಥಿಕವಾಗಿ ಮುನ್ನಡೆಸಲಿದ್ದಾರೆ. ಉದ್ಯೋಗಿಗಳಿಗೆ ಬಡ್ತಿ, ಸಂಬಳ ಹೆಚ್ಚಾಗಲಿದ್ದು, ಅಧಿಕಾರಿಗಳಿಗೆ ಪ್ರಶಂಸೆ ದೊರೆಯಲಿದೆ. ಆರೋಗ್ಯದಲ್ಲಿ ಚೇತರಿಕೆ ಕಾಣಲಿದ್ದೀರಿ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದ್ದು, ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ (ಏಜೆನ್ಸೀಸ್).
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು/ ಪಂಚಾಂಗಗಳು/ ನಂಬಿಕೆಗಳು/ ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.